ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

Date:

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಲುಪುವ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

- Advertisement -

ಡಿ.ಕೆ.ಶಿವಕುಮಾರ ಅವರು ಶನಿವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದು, ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿ ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತರೊಂದಿಗೆ ಮಾತುಕತೆ ನಡೆಸಿದ ಬಳಿಕ ಡಿ.ಕೆ.ಶಿವಕುಮಾರ ಅವರು ಶನಿವಾರ ರಾತ್ರಿಯೇ ವಾಪಸ್ ತೆರಳಲಿದ್ದಾರೆ. ಅವರ ಬೆಳಗಾವಿ ಪ್ರವಾಸದ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ.

ಹತ್ತರಗಿ ಟೋಲ್ ನಾಕಾದಿಂದ ಆರಂಭಗೊಂಡಿರುವ ರೈತರ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ರೈತರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಮಾತುಕತೆ ಮಹತ್ವ ಪಡೆದಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...