ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಹೆಸ್ಕಾಂ ಇಲಾಖೆ ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಿದ್ದಾರೆ.
ಟ್ರಾನ್ಸ್ಫಾರ್ಮರ್ ದೋಷದಿಂದ ನೀರಾವರಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹಾಳಾದ ಟ್ರಾನ್ಸ್ಫಾರ್ಮರ್ ತೆರವುಗೊಳಿಸಿ ಹೊಸ ಟ್ರಾನ್ಸ್ಫಾರ್ಮರ್ ಅಳವಡಿಸಿದರು. ಇದರಿಂದ ವಿದ್ಯುತ್ ಸರಬರಾಜು ಪುನರಾರಂಭಗೊಂಡು ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿದ ಹೆಸ್ಕಾಂ ಸಿಬ್ಬಂದಿಯ ಕಾರ್ಯವನ್ನು ಗ್ರಾಮಸ್ಥರು ಹಾಗೂ ರೈತರು ಶ್ಲಾಘಿಸಿದ್ದು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.



