ಬೆಳಗಾವಿ | ಅಪಾಯಕಾರಿ ಬೈಕ್ ರೈಡ್: ನಾಲ್ವರು ಯುವಕರು ವಶಕ್ಕೆ ₹9,500 ದಂಡ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸ್‌
ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಸೆ.2ರಂದು ಬೆಳಗ್ಗೆ 11ರ ಸುಮಾರಿಗೆ ನಾಲ್ವರು ಯುವಕರು ಯಮಹಾ ಮೋಟಾರ್‌ಸೈಕಲ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ಆಧರಿಸಿ ಬೀಟ್ ಸಿಬ್ಬಂದಿ ಆ‌ರ್.ಯು. ಹನುಮನ್ನವರ ಸ್ಥಳೀಯವಾಗಿ ವಿಚಾರಣೆ ನಡೆಸಿ ಸವಾರರನ್ನು ಗುರುತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೆಲ್ಲದ ಬಾಗೇವಾಡಿ ನಿವಾಸಿಗಳಾದ ಅಜರುದ್ದೀನ್ ಇಬ್ರಾಹಿಂ ಗೋಕಾಕ, ಶ್ರೀನಾಥ ಚೇತನ ಅಲಗುಂಡಿ, ಪ್ರವೀಣ್‌ ಬಸವರಾಜ್ ಬಿದರೆ ಹಾಗೂ ಶಂಕರ ಮಹಾದೇವ ಬಿದರೊಳ್ಳಿ ಅವರನ್ನು ಸೆ.5ರಂದು ನಾಲ್ಕು ಬೈಕ್‌ಗಳ ಸಮೇತ ವಶಕ್ಕೆ ಪಡೆಯಲಾಗಿದೆ.

ಹೆಲ್ಮಟ್ ಧರಿಸದಿರುವುದು, ಚಾಲನಾ ಪರವಾನಗಿ ಹೊಂದಿರದಿರುವುದು ಹಾಗೂ ವಾಹನಗಳಿಗೆ ವಿಮೆ ಮಾಡಿಸದಿರುವುದಕ್ಕಾಗಿ ಮೋಟಾರು ವಾಹನ ಕಾಯ್ದೆಯಡಿ ₹9,500 ದಂಡ ವಿಧಿಸಲಾಗಿದೆ. ಅಲ್ಲದೇ ಬಿಎನ್‌ಎಸ್‌ ಕಲಂ 281, 285 ಹಾಗೂ 270ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ. ರಾಮರಾಜನ್ (ಐಪಿಎಸ್), ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಆರ್.ಬಿ. ಬಸರಗಿ, ಗೋಕಾಕ ಡಿವೈಎಸ್‌ಪಿ ರವಿ ಡಿ. ನಾಯಕ್ ಹಾಗೂ ಹುಕ್ಕೇರಿ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಎಸ್‌.ಆ‌ರ್. ಗಣಾಚಾರಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವವರ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಮೂಲಕ ತೀವ್ರ ನಿಗಾ ವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...