ಬೆಳಗಾವಿ | 9ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಬಂಧನ

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ 9ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ರೌಡಿ ಶೀಟರ್‌ನನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ನುಗ್ಗಾನಟ್ಟಿ ಗ್ರಾಮದ ಬಾಳಪ್ಪ ಮಹಾದೇವಪ್ಪ ಹೊಂಡಪ್ಪನವರ (26) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆರೋಪಿಯ ವಿರುದ್ಧ 2 ರಾಬರಿ, 1 ದರೋಡೆ, 1 ಕೊಲೆ ಯತ್ನ, 1 ಜೂಜಾಟ, 1 ಅಪಹರಣ, ಎಸ್‌ಸಿ/ಎಸ್‌ಟಿ ದೌರ್ಜನ್ಯ, 1 ಕೊಲೆ, 1 ಖೋಟಾ ನೋಟು ಚಲಾವಣೆ, 1 ಬಲವಂತದ ಸುಲಿಗೆ, ಸಾಕ್ಷ್ಯನಾಶ (ಹನಿ ಟ್ರ್ಯಾಪಿಂಗ್) ಸೇರಿದಂತೆ 9ಕ್ಕೂ ಅಧಿಕ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಆತನ ವಿರುದ್ಧ 12 ಮುಂಜಾಗ್ರತಾ ಕ್ರಮದ ಪ್ರಕರಣಗಳೂ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಸುರಕ್ಷತೆ, ಕಾನೂನು ಸುವ್ಯವಸ್ಥೆ, ಶಾಂತಿ ಹಾಗೂ ಸರಕು ಸಾಗಾಟಕ್ಕೆ ತೊಡಕಾಗುವ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ.

ಆತನ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಮುರಗೋಡ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...