ಬೆಳಗಾವಿ | ವೀರಭದ್ರೇಶ್ವರ-ಬಸವೇಶ್ವರ ಏತ ನೀರಾವರಿ ಯೋಜನೆಗಳಿಗೆ ಗಡುವು ನಿಗದಿ ಮಾಡಬೇಕು: ಚೂನಪ್ಪ ಪೂಜಾರಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರಿಗೆ ಅನುಕೂಲವಾಗುವ ವೀರಭದ್ರೇಶ್ವರ ಹಾಗೂ ಸಾಲಾಪೂರ ಬಸವೇಶ್ವರ ಏತ ನೀರಾವರಿ ಯೋಜನೆಗಳಿಂದ ಶೀಘ್ರ ಜಮೀನುಗಳಿಗೆ ನೀರು ತಲುಪಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

- Advertisement -

ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಹಾಗೂ ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಮಗಾರಿಗಳು ಆರಂಭವಾಗಿ ಹತ್ತು ವರ್ಷಗಳಾದರೂ ರೈತರ ಜಮೀನುಗಳಿಗೆ ನೀರು ತಲುಪದಿರುವುದು ದುರಂತಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ಸ್ಥಳೀಯ ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯ ಪ್ರತಿಬಿಂಬ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಥಳೀಯ ಶಾಸಕ ಅಶೋಕ ಪಟ್ಟಣ ಅವರು ಮುಖ್ಯಮಂತ್ರಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೂ ಯೋಜನೆ ಪೂರ್ಣಗೊಳಿಸಲು ಗಂಭೀರ ಪ್ರಯತ್ನ ಮಾಡಿಲ್ಲ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಿ, ರೈತರಿಗೆ ನೀರು ಒದಗಿಸುವ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇಲ್ಲವಾದಲ್ಲಿ ರೈತ ಸಂಘದ ಪದಾಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಿ, ಗುರ್ಲಾಪೂರ ಮಾದರಿಯಲ್ಲಿ ಸಾಲಹಳ್ಳಿ ಮುಖ್ಯರಸ್ತೆ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು. ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಯೋಜನೆಗೆ ಗಡುವು ನಿಗದಿ ಮಾಡಿ ಸ್ಪಷ್ಟ ಮಾಹಿತಿ ನೀಡುವವರೆಗೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಬೆಳಗಾವಿ ಜಿಲ್ಲಾಧ್ಯಕ್ಷ – ಕುಮಾರ ವರ್ಧಿ

ಜಿಲ್ಲಾ ಉಪಾಧ್ಯಕ್ಷ – ಶಿವಾನಂದ ದೊಡವಾಡ

ಕಾರ್ಯದರ್ಶಿ – ಮಾರುತಿ ಕರಿಸತ್ತಿ

ಜಿಲ್ಲಾ ಸಂಚಾಲಕರು – ಶಿವನಗೌಡ ನಾಡಗೌಡ್ರ, ಮಲ್ಲಿಕಾರ್ಜುನ ಮಠಪತಿ

ಸಂಘಟನಾ ಕಾರ್ಯದರ್ಶಿ – ಹಣಮಂತ ಕಾಮನ್ನವರ

ರಾಮದುರ್ಗ ತಾಲೂಕಾಧ್ಯಕ್ಷರಾಗಿ ಜಗದೀಶ ದೇವರಡ್ಡಿ ಪುನರ್ ಆಯ್ಕೆಯಾಗಿದ್ದು, ತಾಲೂಕಾ ಸಲಹಾ ಸಮಿತಿಗೆ ಹಲವು ಮುಖಂಡರನ್ನು ಆಯ್ಕೆ ಮಾಡಲಾಗಿದೆ. ಹಸಿರು ಸೇನೆಯ ತಾಲೂಕಾ ಅಧ್ಯಕ್ಷರಾಗಿ ಮಾರುತಿ ಕುಂಬಾರ ಹಾಗೂ ಗೌರವಾಧ್ಯಕ್ಷರಾಗಿ ರಾಜೇಶ ಅಣ್ಣಿಗೇರಿ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

ಸ್ಥಳೀಯ ರೈತ ಮುಖಂಡರೊಂದಿಗೆ ಸಭೆ ನಡೆಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಚೂನಪ್ಪ ಪೂಜಾರಿ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...