ಬೆಳಗಾವಿ | ಅಥಣಿ ರಾಜಕೀಯ ಕುರಿತು ಮೌನ ವಹಿಸುವ ನಿರ್ಧಾರ: ರಮೇಶ್‌ ಜಾರಕಿಹೊಳಿ

Date:

ಅಥಣಿಯಲ್ಲಿ ಮಾತನಾಡುವುದಕ್ಕೆ ತನ್ನ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಹಿತೈಷಿಗಳ ಸಲಹೆ ಮೇರೆಗೆ ಮುಂದಿನ ದಿನಗಳಲ್ಲಿ ಅಥಣಿ ರಾಜಕೀಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

- Advertisement -

ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಥಣಿಯಲ್ಲಿ ಮಾತನಾಡಿದರೆ ತನ್ನನ್ನು ‘ಹೊರಗಿನವರು’ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಈ ರೀತಿಯ ಬೆಳವಣಿಗೆಗಳಿಂದ ಬೇಸತ್ತು ಮೌನ ವಹಿಸುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವೇಳೆ ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿತ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಸ್ಥಳೀಯ ಶಾಸಕನ ಬೇಜವಾಬ್ದಾರಿಯೇ ಈ ಘಟನೆಗೆ ಕಾರಣ ಎಂದು ಆರೋಪಿಸಿದರು. ಈ ಘಟನೆಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದ್ದು, ಹಿರಿಯ ಶಾಸಕನಿಂದ ಬಂದ ಹಾರಿಕೆ ಮಾತುಗಳು ರೈತರ ಮನಸ್ಸಿಗೆ ನೋವು ತಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಸ್ಥಳೀಯ ಶಾಸಕನ ಬೇಜವಾಬ್ದಾರಿಯೇ ಈ ಘಟನೆಗೆ ಕಾರಣ ಎಂದು ಆರೋಪಿಸಿದರು. ಈ ಘಟನೆಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದ್ದು, ಹಿರಿಯ ಶಾಸಕನಿಂದ ಬಂದ ಹಾರಿಕೆ ಮಾತುಗಳು ರೈತರ ಮನಸ್ಸಿಗೆ ನೋವು ತಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಗವಾಡ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಮಸ್ಯೆಗೆ ರಾಜಕೀಯ ಬಣ್ಣ ಹಚ್ಚುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದರು. ಆದಷ್ಟು ಬೇಗ ಮಹಾರಾಷ್ಟ್ರ ಸರ್ಕಾರದಿಂದ ನೀರು ಬಿಡುಗಡೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ರಾಜ್ಯ ಸರ್ಕಾರ ತಕ್ಷಣ ಮಾತುಕತೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...