ಬೆಳಗಾವಿ | ನರೇಗಾ ಹಣ ವಸೂಲಾತಿಗೆ ವಿಳಂಬ, ಅ.22ರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ: ಶ್ರೀನಿವಾಸಗೌಡ ಪಾಟೀಲ್‌

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಹಣ ದುರ್ಬಳಕೆಯಾಗಿದೆ ಎಂಬ ಪ್ರಕರಣಗಳಲ್ಲಿ ಒಂಬುಡ್ಸ್‌ಮನ್ ಆದೇಶದ ಹೊರತಾಗಿಯೂ ಬಾಕಿ ಹಣ ವಸೂಲಾತಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ, ಅ.24ರಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಬಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಕುರಿತು ಅ.12ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ರಾಮದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ನರೇಗಾ ಯೋಜನೆಯಲ್ಲಿನ ಹಣ ದುರ್ಬಳಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂಬುಡ್ಸ್‌ಮನ್ ಆದೇಶದಂತೆ ಹಣ ವಸೂಲಿ ಮಾಡಬೇಕು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

₹17 ಲಕ್ಷ ಬಾಕಿ ವಸೂಲಿಗೆ ಆಗ್ರಹ

ರಾಮದುರ್ಗ ತಾಲೂಕಿನ ಓಬಳಾಪೂರ ಮತ್ತು ಮುದೇನೂರು ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ನರೇಗಾ ಪ್ರಕರಣಗಳಲ್ಲಿ ಸುಮಾರು ₹17 ಲಕ್ಷ ಹಣ ಬಾಕಿ ಉಳಿದಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ರಾಮದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒಟ್ಟು ₹31 ಲಕ್ಷ ವಸೂಲಾತಿಗೆ ಸಂಬಂಧಿಸಿದ ವಿಷಯವಿದ್ದು, ಇಲಾಖಾ ತನಿಖೆಗೆ ಸಂಬಂಧಿಸಿದಂತೆ ಸುಮಾರು ₹62 ಲಕ್ಷ ಹಣದ ವಸೂಲಾತಿ ಹಾಗೂ ದಂಡನೆ ಕ್ರಮಗಳ ಅನುಷ್ಠಾನದಲ್ಲಿಯೂ ವಿಳಂಬವಾಗಿದೆ ಎಂದು ಪಾಟೀಲ್‌ ಆರೋಪಿಸಿದ್ದಾರೆ.

ಜಿಲ್ಲಾ ಮತ್ತು ರಾಜ್ಯ ಮಟ್ಟದ ಒಂಬುಡ್ಸ್‌ಮನ್‌ಗಳು ಹಲವು ಪ್ರಕರಣಗಳಲ್ಲಿ ಹಣ ವಸೂಲಾತಿಗೆ ಆದೇಶಿಸಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಹಣ ವಸೂಲಿ ಮಾಡಿಲ್ಲ. ಈ ಕುರಿತು ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಅವರು 2026ರ ಆಗಸ್ಟ್ 3ರಂದು ಹಾಗೂ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಆಗಸ್ಟ್ 6ರಂದು ಕ್ರಮದ ವರದಿ ಸಲ್ಲಿಸುವಂತೆ ಸೂಚಿಸಿದ್ದರೂ, ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಪ್ರಕರಣಗಳ ಆದೇಶಗಳೂ ಜಾರಿಯಾಗಿಲ್ಲವೆಂಬ ಆರೋಪ

ಇಲಾಖಾ ತನಿಖೆ ಹಾಗೂ ಲೋಕಾಯುಕ್ತ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಣ ವಸೂಲಿ, ಬಡ್ಡಿ ಮತ್ತು ದಂಡನೆ ಸೇರಿದಂತೆ ವಿವಿಧ ಕ್ರಮಗಳನ್ನು ಜಾರಿಗೊಳಿಸುವಲ್ಲಿಯೂ ವಿಳಂಬವಾಗಿದೆ ಎಂದು ಪಾಟೀಲ್‌ ಆರೋಪಿಸಿದ್ದಾರೆ.

ಈ ಸಂಬಂಧ ಬೆಳಗಾವಿ ಜಿಲ್ಲಾ ಪಂಚಾಯಿತಿಯು 2019-20 ಮತ್ತು 2022-23ನೇ ಸಾಲಿನ ವಿವಿಧ ಪ್ರಕರಣಗಳಲ್ಲಿ ಹೊರಡಿಸಿರುವ ಆದೇಶಗಳನ್ನು ಉಲ್ಲೇಖಿಸಿರುವ ಅವರು, ಆದೇಶಗಳಂತೆ ವಸೂಲಾತಿ ಮತ್ತು ಇತರ ಶಿಸ್ತು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ಹಣ ದುರ್ಬಳಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಆದೇಶಗಳಲ್ಲಿ ಗುರುತಿಸಲಾದವರ ವಿರುದ್ಧ ನಿಯಮಾನುಸಾರ ಹಣ ವಸೂಲಿ, ಶಿಸ್ತು ಕ್ರಮ ಹಾಗೂ ಅಗತ್ಯವಿದ್ದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅ.24ರಿಂದ ಅನಿರ್ದಿಷ್ಟಾವಧಿ ಧರಣಿ

ಹಣ ವಸೂಲಾತಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅ.22ರಿಂದ ರಾಮದುರ್ಗ ತಾಲೂಕು ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಬಿ.
ಪಾಟೀಲ್‌ ಎಚ್ಚರಿಸಿದ್ದಾರೆ.

ಈ ಕುರಿತು ರಾಮದುರ್ಗ ಶಾಸಕ ಅಶೋಕ ಎಂ. ಪಟ್ಟಣ ಅವರಿಗೂ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಕ್ಕಾಗಿ ರಾಮದುರ್ಗ ತಹಶೀಲ್ದಾರರಿಗೂ ಪ್ರತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...