ಬೆಳಗಾವಿ | ಆಶ್ರಯ ಯೋಜನೆಗಾಗಿ ರಾಜ್ಯಪಾಲರ ಹೆಸರಿನಲ್ಲಿದ್ದ ಭೂಮಿ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಆಶ್ರಯ ಯೋಜನೆಗಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದರು.

- Advertisement -

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳವಡಿಯ ಸರ್ವೆ ಸಂಖ್ಯೆ 221/1ಬಿಯಲ್ಲಿ ಖರಾಬ್ ಹೊರತುಪಡಿಸಿ, 13 ಎಕರೆ, 13 ಗುಂಟೆ ಜಮೀನಿತ್ತು. ಈ ಪೈಕಿ 6 ಎಕರೆ ಜಮೀನನ್ನು ಮಾಲೀಕ ಇಮಾಮ್‌ಹುಸೇನ್‌ ಅತ್ತಾರ್ ಅವರಿಂದ 2002ರಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಲಾಗಿತ್ತು. ಆದರೆ, 2022ರಲ್ಲಿ ಪೋಡಿ ಮತ್ತು ಕ್ಷೇತ್ರ ದುರಸ್ತಿ ವೇಳೆ, ರಾಜ್ಯಪಾಲರ ಹೆಸರಿನಲ್ಲಿ 37 ಗುಂಟೆ ಮಾತ್ರ ದಾಖಲಿಸಿ ಕಂದಾಯ ಮತ್ತು ಭೂಮಾಪನ ಇಲಾಖೆ ಅಧಿಕಾರಿಗಳು ವಂಚಿಸಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ₹10 ಕೋಟಿ ನಷ್ಟ ಉಂಟು ಮಾಡಿದ್ದಾರೆ’ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

‘ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ನಿತೇಶ್‌ ಪಾಟೀಲ, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿದ್ದ ಶಶಿಧರ ಬಗಲಿ, ಭೂದಾಖಲೆಗಳ ಉಪನಿರ್ದೇಶಕರಾಗಿದ್ದ ಮೋಹನ ಶಿವನ್ನವರ, ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಮುರಗೋಡ ಸೇರಿ ಅನೇಕರು, ಈ ಜಮೀನಿನಲ್ಲಿ ನಿವೇಶನ ನಿರ್ಮಿಸಿ ಖಾಸಗಿಯವರಿಗೆ ದುಬಾರಿ ಬೆಲೆಗೆ ಮಾರಲು ಪೋಡಿ ಮತ್ತು ಕ್ಷೇತ್ರ ದುರಸ್ತಿ ಮಾಡಿದ್ದಾರೆ. ಆದರೆ, ಈ ಪ್ರಕ್ರಿಯೆ ಕೈಗೊಳ್ಳುವ ಮುನ್ನ, ನಿಯಮದಂತೆ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು ಆರೋಪಿಸಿದರು.

‘ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು, ರಾಜ್ಯಪಾಲರ ಹೆಸರಿನಲ್ಲಿದ್ದ ಆಸ್ತಿಯನ್ನೇ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇಲಾಖೆ ವಿಚಾರಣೆಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...