ಬೆಳಗಾವಿ | ರಾಮದುರ್ಗ, ಸವದತ್ತಿ ಬರ ಘೋಷಣೆಗೆ ಆಗ್ರಹ: ವಿಫಲವಾದರೆ ಉಪವಾಸ ಸತ್ಯಾಗ್ರಹ: ಶ್ರೀನಿವಾಸಗೌಡ ಪಾಟೀಲ್

Date:

ಮಳೆಯ ಕೊರತೆಯಿಂದ ಬೆಳೆಗಳು ಒಣಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗ ಹಾಗೂ ಸವದತ್ತಿ ತಾಲೂಕುಗಳನ್ನು ತಕ್ಷಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಬಿತ್ತನೆ, ಕೃಷಿ ಕೂಲಿ ಸೇರಿದಂತೆ ವಿವಿಧ ಖರ್ಚುಗಳನ್ನು ಮಾಡಿ ಬೆಳೆದ ಬೆಳೆಗಳು ಒಣಗಿ ನಾಶವಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ನಷ್ಟ ಹಾಗೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದ ಮಳೆಯಾಶ್ರಿತ ಒಣಭೂಮಿ ಪ್ರದೇಶಗಳಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ರಾಜ್ಯದ ರೈತರಿಗೆ ತಕ್ಷಣ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತರಿಗೆ ಆತ್ಮವಿಶ್ವಾಸ ತುಂಬುವಂತಹ ಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜನಪ್ರತಿನಿಧಿಗಳು ಹಾಗೂ ಸಚಿವರು ತಮ್ಮ ಒಂದು ವರ್ಷದ ಸಂಬಳವನ್ನು ರೈತರ ಬರ ಪರಿಹಾರ ನಿಧಿಗೆ ನೀಡಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಕರ್ತವ್ಯಲೋಪದ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಈ ದಿನ.ಕಾಮ್ ಜತೆ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಮಾತನಾಡಿ ರಾಮದುರ್ಗ ಹಾಗೂ ಸವದತ್ತಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಹಿತ ಕಾಪಾಡಬೇಕು. ಸರ್ಕಾರ ಇದರಲ್ಲಿ ವಿಫಲವಾದರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ರಾಮದುರ್ಗ, ಸವದತ್ತಿ ಶಾಸಕರು ರಾಜೀನಾಮೆ ನೀಡಿ ರೈತರ ಸಂಕಷ್ಟದೊಂದಿಗೆ ನಿಂತು ಜನರ ಹೋರಾಟಕ್ಕೆ ಬೆಂಬಲ ನೀಡಬೇಕು. ರೈತರ ನ್ಯಾಯಕ್ಕಾಗಿ ಅಗತ್ಯವಿದ್ದರೆ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಅಧಿಕಾರಿಗಳ ಕರ್ತವ್ಯಲೋಪದ ವಿರುದ್ಧವೂ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಬೆಳಗಾವಿ | ಜಿಲ್ಲೆಯಲ್ಲಿ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನ ಬೆಳಗಾವಿ ಜಿಲ್ಲೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...