ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಯಬಾಗ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಯಭಾಗ ತಾಲೂಕನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೃಷ್ಣ ಎಡದಂಡೆ ಕಾಲುವೆಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಗಣೇಶ ಇಳಿಗೇರ, “ರಾಯಬಾಗ ತಾಲೂಕಿನ ರೈತರಿಗೆ ಆಗುತ್ತಿರುವ ಅನ್ಯಾಯ ಕೇಳುವರಾರು? ರೈತರ ಕಣ್ಣೀರು ಅಧಿಕಾರಿಗಳಿಗೆ ಕೇಳುತ್ತಿಲ್ಲ. ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.