ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; 144 ಸೆಕ್ಷನ್ ಜಾರಿ

Date:

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಮ್‌ಇಎಸ್‌ ಮಹಾಮೇಳಾವ್​ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್‌.ಎನ್.ಸಿದ್ದರಾಮಪ್ಪ ಅನುಮತಿ ನಿರಾಕರಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

- Advertisement -

ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲೇಲೇ ಮೈದಾನ, ಕ್ಯಾಂಪ್ ಪೊಲೀಸ್ ಠಾಣೆಯ ಧರ್ಮವೀರ ಸಂಭಾಜಿ ಸರ್ಕಲ್, ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ಉದ್ಯಾನವನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಡಿ. 4ರ ಬೆಳಗ್ಗೆ 6ರಿಂದ ಡಿ.5, ಸಂಜೆ 6ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮಹಾಮೇಳಾವದಿಂದ ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ಭಂಗವಾಗಿ ನಗರದಾದ್ಯಂತ ಹಲವಾರು ಅಹಿತಕರ ಘಟನೆಗಳು ನಡೆದು ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಮಹಾರಾಷ್ಟ್ರದ ಸಚಿವರು, ಶಾಸಕರು ಹಾಗೂ ಮರಾಠಾ ಮುಖಂಡರು ಆಗಮಿಸುವ ಹಿನ್ನೆಲೆಯಲ್ಲಿ ಗಡಿ ವಿಚಾರ ಕುರಿತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ.

ಇನ್ನು ರಾಜ್ಯಾದ್ಯಂತ ಹಲವಾರು ಕನ್ನಡಪರ ಸಂಘಟನೆಗಳು ಮಹಾಮೇಳಾವ್​ ಕಾರ್ಯಕ್ರಮಕ್ಕೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತ ಬಂದಿದ್ದು, ಈ ಬಾರಿ ಅನುಮತಿ ನೀಡಿದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದರು. ಈ ಎಲ್ಲ ಕಾರಣಗಳಿಂದಾಗಿ ಮಹಾಮೇಳಾವ್​ಗೆ ಅನುಮತಿ‌ ನಿರಾಕರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...