ಬೆಳಗಾವಿ | ನಾವು ಅಧಿಕಾರಕ್ಕೆ ಬಂದ ನಂತರ 520 ಕೋಟಿ ಠೇವಣಿ ಹೆಚ್ಚಳ: ಅಣ್ಣಾಸಾಹೇಬ ಜೊಲ್ಲೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಸಹಕಾರಿ ಸಂಘಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಬ್ಯಾಂಕ್ ಸಾಧನೆ ಕುರಿತು ಮಹತ್ವದ ಮಾಹಿತಿ ನೀಡಿದರು.

- Advertisement -

ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ತಾವು ಅಧ್ಯಕ್ಷರಾದ ಬಳಿಕ ಕೇವಲ ಮೂರು ತಿಂಗಳಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 520 ಕೋಟಿ ರೂ.ಗಳಷ್ಟು ಠೇವಣಿ ಹೆಚ್ಚಳವಾಗಿದೆ ಎಂದು ಹೇಳಿದರು. ಪ್ರಸ್ತುತ ಬ್ಯಾಂಕ್‌ನಲ್ಲಿ ಒಟ್ಟು 5601 ಕೋಟಿ ರೂ.ಗಳ ಡಿಪಾಜಿಟ್ ಸಂಗ್ರಹವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರೈತರಿಗೆ ಬ್ಯಾಂಕ್‌ನಿಂದ ಮೂರು ರೀತಿಯ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದ ಅವರು, ಕೃಷಿ ಪತ್ತಿನ ಸಂಘಗಳ ಮೂಲಕ 0% ಬಡ್ಡಿದರದಲ್ಲಿ ಸಾಲ, 3% ಬಡ್ಡಿದರದಲ್ಲಿ ಟ್ರ್ಯಾಕ್ಟ‌ರ್ ಸಾಲ ಹಾಗೂ 3% ಬಡ್ಡಿದರದಲ್ಲಿ ಪೈಪ್‌ಲೈನ್ ಸಾಲ ನೀಡಲಾಗುತ್ತಿದೆ ಎಂದರು. ಜೊತೆಗೆ ಪ್ರತಿ ಎಕರೆಗೆ 40 ಸಾವಿರ ರೂ.ಗಳವರೆಗೆ ಸಾಲ ನೀಡುವ ವ್ಯವಸ್ಥೆ ಜಾರಿಯಲ್ಲಿದೆ ಎಂದು ಹೇಳಿದರು.

ಸಹಕಾರಿ ಸಂಘಗಳ ಸಿಬ್ಬಂದಿಗಳ ವೇತನ ಹೆಚ್ಚಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ರಾಮದುರ್ಗ ತಾಲೂಕಿನ ಯಾವುದೇ ಸಂಘ-ಸಂಸ್ಥೆಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಸಹಕಾರಿ ಸಂಘಗಳಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸರಳೀಕರಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ರಾಮದುರ್ಗದಲ್ಲಿ ₹33 ಕೋಟಿ ವೆಚ್ಚದ ಆಸ್ಪತ್ರೆಗೆ ಶಂಕುಸ್ಥಾಪನೆ, ಜಿಲ್ಲೆಗೆ 330 ಕೋಟಿ ಕೊಡುಗೆ: ಸಚಿವ ದಿನೇಶ ಗುಂಡುರಾವ

ಈ ಸಂದರ್ಭದಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಪಿ.ಎಫ್. ಪಾಟೀಲ, ಕೆ.ವಿ. ಪಾಟೀಲ ಸೇರಿದಂತೆ ಅನೇಕ ಮುಖಂಡರು, ಸಹಕಾರಿ ಸಂಘಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...