ಬೆಳಗಾವಿ | ಎಪಿಎಂಸಿ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ: ವ್ಯಾಪಾರದಲ್ಲಿ ಪಾರದರ್ಶಕತೆಯಿಲ್ಲ

Date:

ಬೆಳಗಾವಿ ನಗರದ ಎಪಿಎಂಸಿ ಪ್ರಾಂಗಣಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು, ರೈತರಿಗೆ ಮೂಲಸೌಕರ್ಯ ಕಲ್ಪಿಸದಿರುವುದು ಹಾಗೂ ಮಾರುಕಟ್ಟೆಯಲ್ಲಿನ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

- Advertisement -

ಎಪಿಎಂಸಿಗೆ ಬರುವ ರೈತರಿಗೆ ಕುಡಿಯುವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಏಕೆ ಕಲ್ಪಿಸಿಲ್ಲ ಎಂದು ಎಪಿಎಂಸಿ ಕಾರ್ಯದರ್ಶಿಯನ್ನು ಪ್ರಶ್ನಿಸಿದರು. ತೂಕದ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದಕ್ಕೂ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ವ್ಯಾಪಾರ ವಹಿವಾಟಿನಲ್ಲಿ ಪಾರದರ್ಶಕತೆ ಇಲ್ಲದೆ, ರಸೀದಿ ಹಾಗೂ ತೂಕದ ದಾಖಲೆಗಳಿಲ್ಲದೆ ವ್ಯವಹಾರ ನಡೆಸುತ್ತಿರುವುದು ಸರಿಯಲ್ಲ ಎಂದು ಬಿ. ವೀರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಪರಿಶೀಲನೆ ವೇಳೆ ರೈತರಿಂದ ತರಕಾರಿ ಖರೀದಿಸಿದ ಕುರಿತು ವ್ಯಾಪಾರಸ್ಥರ ಬಳಿ ರಸೀದಿಗಳು ಇಲ್ಲದಿರುವುದು ಕಂಡುಬಂದಿತು. ತರಕಾರಿಯನ್ನು ಯಾರಿಂದ ಖರೀದಿಸುತ್ತೀರಿ, ರೈತರಿಗೆ ಯಾವ ದರ ನೀಡುತ್ತೀರಿ, ರಸೀದಿ ಎಲ್ಲಿದೆ, ತೂಕದ ದಾಖಲೆಗಳನ್ನು ಏಕೆ ನಿರ್ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಎಪಿಎಂಸಿಗೆ ಸಂಬಂಧವಿಲ್ಲದ ವ್ಯಕ್ತಿಗಳೂ ರೈತರಿಂದ ತರಕಾರಿ ಖರೀದಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾರುಕಟ್ಟೆಯ ವಹಿವಾಟಿನಲ್ಲಿ ಪಾರದರ್ಶಕತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದಿನಿಂದ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...