ಬೆಳಗಾವಿ : ಧೂಮ್’ ಶೈಲಿಯ ಮನೆಕಳ್ಳತನ: 1.2 ಕೆ.ಜಿ ಚಿನ್ನ ಕದ್ದಿದ್ದ ಆರೋಪಿ ಬಂಧನ

Date:

ಐಷಾರಾಮಿ ಜೀವನ ನಡೆಸುವ ನಿಟ್ಟಿನಲ್ಲಿ ಹಿಂದಿ ಸಿನಿಮಾದ ‘ಧೂಮ್’ ಶೈಲಿಯನ್ನು ಅನುಸರಿಸಿ ಮನೆಕಳ್ಳತನಗಳಲ್ಲಿ ತೊಡಗಿದ್ದ ಕಳ್ಳನನ್ನು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ ಗುಳೇದ ಬುಧವಾರ ಮಾಹಿತಿ ನೀಡಿದರು.

- Advertisement -

ಅ.22ರಂದು ಯಮಕನಮರಡಿ ಗ್ರಾಮದ ವಿಶ್ವನಾಥ ದುಗ್ಗಾಣಿ ಅವರ ಮನೆಯಲ್ಲಿ 1,280 ಗ್ರಾಂ ಚಿನ್ನಾಭರಣ, 8.5 ಕೆ.ಜಿ ಬೆಳ್ಳಿ ಮತ್ತು ₹1.25 ಲಕ್ಷ ನಗದು ಕಳವು ಆಗಿದ್ದ ಪ್ರಕರಣ ಹಿನ್ನೆಲೆ, ಠಾಣೆ ಇನ್‌ಸ್ಪೆಕ್ಟರ್ ಜಾವೀದ್ ಮುಶಾಪುರಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತನಿಖೆಯ ವೇಳೆ ದೊರೆತ ತಾಂತ್ರಿಕ ಸುಳಿವುಗಳನ್ನು ಆಧರಿಸಿ ಪೊಲೀಸರು ಆರೋಪಿ ಬಂಧನದಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವಿಚಾರಣೆ ವೇಳೆ ಆರೋಪಿಯು ಯಮಕನಮರಡಿ ಹೊರತಾಗಿ ಮನಗುತ್ತಿ ಗ್ರಾಮ ಮತ್ತು ಸಂಕೇಶ್ವರ ಠಾಣಾ ವ್ಯಾಪ್ತಿಯಲ್ಲಿಯೂ ಮನೆಕಳ್ಳತನ ಎಸಗಿದ್ದನ್ನು ಒಪ್ಪಿಕೊಂಡಿದ್ದು, ಒಟ್ಟು ನಾಲ್ಕು ಪ್ರಕರಣಗಳು ಭೇದಗೊಂಡಿವೆ ಎಂದು ಎಸ್‌ಪಿ ಹೇಳಿದರು.

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಆರೋಪಿ ಸುರೇಶ ವಿರುದ್ಧ ಒಟ್ಟು 21 ಪ್ರಕರಣಗಳು ದಾಖಲಾಗಿವೆ. ಶ್ರೀಮಂತರ ಮನೆಗಳಲ್ಲಿ ಯಾರೂ ಇಲ್ಲದ ಸಮಯ, ಸಿಸಿಟಿವಿ ಕ್ಯಾಮೆರಾ ಗೈರು ಎಂಬ ಅಂಶಗಳನ್ನು ಗಮನಿಸಿ ಗುರಿ ಆಯ್ಕೆ ಮಾಡುತ್ತಿದ್ದನು. ಕಳವು ಮಾಡಿದ ಹಣದಲ್ಲಿ ದುಬಾರಿ ಥಾರ್ ವಾಹನ ಹಾಗೂ ಎರಡು ಬೈಕ್‌ಗಳನ್ನು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಇಲಾಖೆ ತಂಡದ ತ್ವರಿತ ಮತ್ತು ವೈಜ್ಞಾನಿಕ ತನಿಖೆಯಿಂದ ಸರಣಿ ಕಳ್ಳತನ ಪ್ರಕರಣಗಳಿಗೆ ತೆರೆಬಿದ್ದಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...