ಬೆಳಗಾವಿ | ಕಿಡ್ನಿ ರೋಗಿಗಳಿಗೆ ₹500ಕ್ಕೆ ಡಯಾಲಿಸಿಸ್ ಸೇವೆ: ಡಾ. ರವಿ ಪಾಟೀಲ

Date:

ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಡಾ. ರವಿ ಪಾಟೀಲ ಅವರು ಆರೋಗ್ಯ ಸಂಸ್ಥೆಯ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ನೂತನ ನೆಪ್ರೋ-ಯುರಾಲಜಿ ಘಟಕವನ್ನು ಆರಂಭಿಸಿದ್ದಾರೆ.

- Advertisement -

ನಗರದ ಸಾಂಬ್ರಾ ಏರ್‌ಪೋರ್ಟ್ ರಸ್ತೆಯಲ್ಲಿರುವ ಡಾ. ರವಿ ಪಾಟೀಲ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾನುವಾರ ನೂತನ ನೆಪ್ರೋ-ಯುರಾಲಜಿ ಘಟಕ ಲೋಕಾರ್ಪಣೆಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಪಾಟೀಲ, ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಒಂದೇ ಸೂರಿನಡಿ ಅತ್ಯಾಧುನಿಕ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿಶೇಷವಾಗಿ ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಉಚಿತ ಕನ್ಸಲೇಷನ್‌ ಸೌಲಭ್ಯ ನೀಡಲಾಗುತ್ತಿದ್ದು, ರೋಗಿಗಳ ಅನುಕೂಲಕ್ಕಾಗಿ ಸಬ್ಸಿಡಿ ದರದಲ್ಲಿ ಕೇವಲ ₹500ಕ್ಕೆ ಡಯಾಲಿಸಿಸ್‌ ಸೇವೆ ಒದಗಿಸಲಾಗುತ್ತಿದೆ ಎಂದರು.

ಡಯಾಲಿಸಿಸ್‌ ಸೇವೆಯು ದಿನದ 24 ಗಂಟೆಯೂ ಲಭ್ಯವಿರಲಿದೆ. ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಡಯಾಲಿಸಿಸ್ ಅಗತ್ಯವಿರುವ ಪ್ರತಿಯೊಬ್ಬ ರೋಗಿಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ನೆಫ್ರಾಲಜಿಸ್ಟ್‌, ಯುರಾಲಜಿಸ್ಟ್, ನ್ಯೂರೋಸರ್ಜನ್, ಪ್ಲಾಸ್ಟಿಕ್ ಸರ್ಜನ್, ಫಿಸಿಷಿಯನ್ ಹಾಗೂ ಜನರಲ್ ಸರ್ಜನ್ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರ ಸೇವೆ ಲಭ್ಯವಿದೆ. ಅನುಭವಿ ನರ್ಸಿಂಗ್ ಸಿಬ್ಬಂದಿ, ತರಬೇತಿ ಪಡೆದ ಡಯಾಲಿಸಿಸ್‌ ಟೆಕ್ನಾಲಜಿಸ್ಟ್‌ಗಳು, ಸುಸಜ್ಜಿತ ಐಸಿಯು ಘಟಕ ಹಾಗೂ ಆಪರೇಷನ್‌ ಥಿಯೇಟ‌ರ್ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಒಂದೇ ಸೂರಿನಡಿ ದೊರೆಯಲಿವೆ ಎಂದರು.

ಭಾರತದಲ್ಲಿ ಪ್ರತಿವರ್ಷ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಹೊಸ ಕಿಡ್ನಿ ಫೇಲಿಯರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೇಶದಲ್ಲಿ ಪ್ರತಿವರ್ಷ ಸುಮಾರು ಮೂರೂವರೆ ಕೋಟಿಗೂ ಅಧಿಕ ಡಯಾಲಿಸಿಸ್‌ ಸೆಷನ್‌ಗಳ ಅಗತ್ಯ ಉಂಟಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳಿಗೆ ನಿರಂತರ ಡಯಾಲಿಸಿಸ್‌ ಸೇವೆಯ ಅಗತ್ಯವಿರುವ ಹಿನ್ನೆಲೆಯಲ್ಲಿ, ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಡಯಾಲಿಸಿಸ್‌ ಸೌಲಭ್ಯ ಒದಗಿಸುವುದು ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದೆ ಎಂದು ಡಾ. ರವಿ ಪಾಟೀಲ ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...