ಬೆಳಗಾವಿ | ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಕಳ್ಳಸಾಗಾಣೆ: ಬೃಹತ್ ಜಾಲ ಪತ್ತೆ

Date:

ಗಲ್ಫ್ ದೇಶಗಳಿಂದ ಅಕ್ರಮವಾಗಿ ಡೀಸೆಲ್ ಕಳ್ಳಸಾಗಣೆ ಮಾಡುತ್ತಿದ್ದ ಜಾಲವೊಂದನ್ನು ಮಾಳಮಾರುತಿ ಪೊಲೀಸ್‌ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಸಾಗುತ್ತಿದ್ದ ಟ್ಯಾಂಕ‌ರ್ ಮೇಲೆ ದಾಳಿ ನಡೆಸಿದ ಪೊಲೀಸರು, ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17 ಸಾವಿರ ಲೀಟರ್ ಡೀಸೆಲ್ (ಮೌಲ್ಯ 17 ಲಕ್ಷ ರೂ.) ಹಾಗೂ ಟ್ಯಾಂಕರ್ ಜಪ್ತಿ ಮಾಡಿದ್ದಾರೆ.

- Advertisement -

ಇನ್ಸ್‌ಪೆಕ್ಟ‌ರ್ ಬಿ.ಆ‌ರ್. ಗಡೇಕ‌ರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತುಮಕೂರು ಮೂಲದ ಟ್ಯಾಂಕ‌ರ್ ಮಾಲೀಕ ಅರಿಹಂತನ ಪಾತ್ರ ಬೆಳಕಿಗೆ ಬಂದಿದೆ. ಗಲ್ಫ್ ದೇಶಗಳಿಂದ ಹಡಗುಗಳ ಮೂಲಕ ತೈಲ ಉತ್ಪನ್ನಗಳನ್ನು ಅಕ್ರಮವಾಗಿ ತರಲಾಗುತ್ತಿದ್ದು, ಮಹಾರಾಷ್ಟ್ರ ಮತ್ತು ರಾಜಸ್ಥಾನದ ಖದೀಮರೂ ಜಾಲದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಕ್ರಮ ಡೀಸೆಲ್ ಅನ್ನು ಕಾಳಸಂತೆಯಲ್ಲಿ ಅರ್ಧ ದರಕ್ಕೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣದ ತನಿಖೆಗೆ ವಿಶೇಷ ತಂಡಗಳನ್ನು ಮುಂಬೈ ಹಾಗೂ ರಾಜಸ್ಥಾನಕ್ಕೆ ರವಾನಿಸಲಾಗುವುದು ಎಂದು ಪೊಲೀಸ್ ಕಮಿಷನ‌ರ್ ಭೂಷಣ್‌ ಬೊರಸೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...