ಬೆಳಗಾವಿ: ಡಿಜಿಟಲ್ ಅರೆಸ್ಟ್ : ದಂಪತಿ ಆತ್ಮಹತ್ಯೆಗೆ ಕಾರಣವಾಗಿದ್ದ ಆರೋಪಿ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ನಡೆದ ವೃದ್ಧ ದಂಪತಿಯ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ತಿರುವು ಕಂಡಿದ್ದು, ‘ಡಿಜಿಟಲ್ ಅರೆಸ್ಟ್’ ಮಾಯಾಜಾಲದ ಮೂಲಕ ಹಣಕಾಸು ವಂಚನೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಚಿರಾಗ್ ಜೀವರಾಜಬಾಯ್ ಲಕ್ಕಡ್ (ಸೂರತ್, ಗುಜರಾತ್) ಎನ್ನಲಾಗಿದ್ದು, ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅತ್ಯಂತ ಹೃದಯವಿದ್ರಾವಕ ಆತ್ಮಹತ್ಯೆ:
ಮಾರ್ಚ್ 27 ರಂದು ಡಿಯಾಗೋ ನಜರತ್ (83) ಹಾಗೂ ಪ್ಲೇವಿಯಾ ನಜರತ್ (78) ಎಂಬ ವೃದ್ಧ ದಂಪತಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ಲೇವಿಯಾ ನಿದ್ರೆ ಮಾತ್ರೆ ಸೇವಿಸಿ ಸಾವಿಗೀಡಾಗಿದರೆ, ಡಿಯಾಗೋ ಚಾಕುವಿನಿಂದ ಕುತ್ತಿಗೆ ಚುಚ್ಚಿಕೊಂಡು ನೀರಿನ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟಿದ್ದರು.

Advertisements

ಡೆತ್‌ನೋಟ್‌ನಿಂದ ಭಯಾನಕ ಬಯಲು:
ಡಿಯಾಗೋ ಬರೆದಿಟ್ಟಿದ್ದ ಡೆತ್‌ನೋಟ್‌ ಪ್ರಕಾರ, ಆತ್ಮಹತ್ಯೆಗೆ ‘ಡಿಜಿಟಲ್ ಅರೆಸ್ಟ್’, ಸೈಬರ್ ಬೆದರಿಕೆ, ಮತ್ತು ಹಣಕಾಸು ಹಗರಣವೇ ಕಾರಣವಾಗಿದೆ. “ನಿಮ್ಮ ನಂಬರಿನಿಂದ ಅಶ್ಲೀಲ ಸಂದೇಶಗಳು ಬಂದಿವೆ, ಸೈಬರ್ ಸೆಲ್‌ಗೆ ದೂರು ನೀಡಲಾಗಿದೆ” ಎಂದು ಅನಿಲ್ ಯಾದವ್ ಎಂಬಾತ ಕರೆಮಾಡಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಆನ್‌ಲೈನ್ ವಂಚನೆ:
ಆರೋಪಿ, ಮೃತರ ಎಸ್‌ಬಿಐ ಖಾತೆಯಿಂದ ಐಡಿಎಫ್‌ಸಿ ಬ್ಯಾಂಕ್‌ನ ಖಾತೆಗೆ ₹6.10 ಲಕ್ಷ ವರ್ಗಾಯಿಸಿ, ಬಳಿಕ ವಿವಿಧ ಖಾತೆಗಳಿಗೆ ಹಣ ಹಂಚಿದ್ದ. ಪ್ರಕರಣದ ತನಿಖೆಯಲ್ಲಿ ಮೊಬೈಲ್ ಸಂಖ್ಯೆಯನ್ನ ಅಡವಟ್ಟಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧನ ಮಾಡಿದರು.

ಪೊಲೀಸರ ಸ್ಪಷ್ಟನೆ:
“ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂತಹ ಡಿಜಿಟಲ್ ಅಪರಾಧಗಳ ವಿರುದ್ಧ ಜನರು ಎಚ್ಚರಿಕೆಯಿಂದ ಇರಬೇಕು,” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X