ಬೆಳಗಾವಿ | ಮಳೆಗಾಗಿ ಕತ್ತೆಗಳ ಮದುವೆ

Date:

ಮುಂಗಾರು ವಿಳಂಬವಾಗಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಲಿ ಎಂಬ ಆಶಯದಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಭಾನುವಾರ ಕತ್ತೆಗಳ ಮದುವೆ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ.

- Advertisement -
1002038122 1

ಕತ್ತೆಗಳ ಮದುವೆ ಮಾಡಿದರೆ ಮಳೆ ಸುರಿಯುತ್ತದೆ ಎಂಬ ಜನಪದ ನಂಬಿಕೆಯ ಆಧಾರದ ಮೇಲೆ ಮಧ್ಯಾಹ್ನ 12.15ಕ್ಕೆ ಗ್ರಾಮದ ಹನುಮಾನ್ ದೇವಸ್ಥಾನದ ಆವರಣದಲ್ಲಿ ವಿವಾಹ ನೆರವೇರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಮದುವೆಯ ಆಮಂತ್ರಣ ಪತ್ರಿಕೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿವಾಹಕ್ಕಾಗಿ ಗಂಡು ಕತ್ತೆಗೆ ‘ಕಾಂತೇಶ’ ಹಾಗೂ ಹೆಣ್ಣು ಕತ್ತೆಗೆ ‘ಕಸ್ತೂರಿ’ ಎಂದು ನಾಮಕರಣ ಮಾಡಲಾಗಿದೆ. ಸಾಂಪ್ರದಾಯಿಕ ಮದುವೆಯ ರೀತಿಯಲ್ಲೇ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮಸ್ಥರು ವರ ಹಾಗೂ ವಧು ಕಡೆಯವರಾಗಿ ಎರಡು ತಂಡಗಳಾಗಿ ವಿಭಜನೆಯಾಗಿ ಸಿದ್ಧತೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಮಳೆ ಎಫೆಕ್ಟ್: ಚಿಕ್ಕೋಡಿಯಲ್ಲಿ ನದಿಗಳ ನೀರಿನ ಮಟ್ಟ 5 ಅಡಿ ಏರಿಕೆ

ಗ್ರಾಮದಲ್ಲಿ ಉತ್ತಮ ಮಳೆಯಾಗಲಿ ಹಾಗೂ ಬೆಳೆಗಳು ಸಮೃದ್ಧಿಯಾಗಲಿ ಎಂಬ ಆಶಯದಿಂದ ಈ ವಿಶಿಷ್ಟ ಆಚರಣೆ ನಡೆಸಲಾಗುತ್ತಿದೆ. ಕತ್ತೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ಜನಪದ ನಂಬಿಕೆ ಗ್ರಾಮಸ್ಥರಲ್ಲಿ ಇಂದಿಗೂ ಜೀವಂತವಾಗಿದ್ದು, ಇದೇ ವಿಶ್ವಾಸದೊಂದಿಗೆ ಗ್ರಾಮಸ್ಥರು ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...