ಬೆಳಗಾವಿ: 2024ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಬೆಳಗಾವಿಯ ಖ್ಯಾತ ಬಂಡಾಯ ಸಾಹಿತಿ ಮತ್ತು ನಿವೃತ್ತ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಬಸವರಾಜ ಕಟ್ಟಿಮನಿ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಡಾ. ಹಿಮ್ಮಡಿ ಅವರು ಸಾಹಿತ್ಯ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನೀಡಿರುವ ಅಮೂಲ್ಯ ಕೊಡುಗೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಜರುಗಲಿದೆ.
ಈ ಕುರಿತು ನಾಟಕಕಾರ ಡಾ.ಡಿ.ಎಸ್ ಚೌಗಲೆ ಈ ದಿನ.ಕಾಮ್ ಗೆ ಅಭಿಪ್ರಾಯ ವ್ಯಕ್ತಪಡಿಸಿ ವೈಚಾರಿಕ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ ಹಿಮ್ಮಡಿಯವರಿಗೆ ಅಂಬೇಡಕರ ಪುರಸ್ಕಾರ ಬಂದಿದ್ದು ಅವರ ಸಮುದಾಯಕ್ಕೆ ಸಿಕ್ಕ ಗೌರವವಾಗಿದೆ ಎಂದು ಹೇಳಿದರು.