ಬೆಳಗಾವಿ | ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 35.93 ಲಕ್ಷ ಮತದಾರರು

Date:

ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ತಿಳಿಸಿದರು.

- Advertisement -

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಶೀಲ್ದಾ‌ರ್ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪರಿಷ್ಕರಣೆಯ ಬಳಿಕ ಜಿಲ್ಲೆಯಲ್ಲಿ ಒಟ್ಟು 35,93,561 ಮತದಾರರು ಇದ್ದು, ಈ ಪೈಕಿ 18,05,685 ಪುರುಷರು, 17,87,715 ಮಹಿಳೆಯರು ಹಾಗೂ 161 ಇತರೆ ಮತದಾರರು ಇದ್ದಾರೆ. ಗೈರು, ಸ್ಥಳಾಂತರ, ಮೃತ ಹಾಗೂ ಇತರೆ ಕಾರಣಗಳಿಂದ 5,13,439 ಮತದಾರರ ಹೆಸರುಗಳನ್ನು ಪರಿಷ್ಕರಣೆಗೊಳಿಸಲಾಗಿದೆ ಎಂದು ತಿಳಿಸಿದರು.

ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ನಮೂನೆ-6 ಮೂಲಕ ಮತದಾರರ ನೋಂದಣಾಧಿಕಾರಿ, ಬಿಎಲ್‌ಒ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. 2026ರ ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರೂ ನೋಂದಣಿಗೆ ಅರ್ಹರಾಗಿದ್ದಾರೆ.

ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಅಥವಾ ಆಕ್ಷೇಪಣೆಗಳಿದ್ದರೆ ಆಗಸ್ಟ್ 24ರಿಂದ ಅರ್ಜಿ ಸಲ್ಲಿಸಬಹುದು. ಮ್ಯಾಪಿಂಗ್ ಆಗದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 4,644 ಮತಗಟ್ಟೆ

ಮತಗಟ್ಟೆಗಳ ದೃಢೀಕರಣದ ಬಳಿಕ ಜಿಲ್ಲೆಯಲ್ಲಿ 119 ಹೊಸ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 4,644ಕ್ಕೆ ಏರಿಕೆಯಾಗಿದೆ. 1,200ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ವಿಭಜಿಸಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಗತ್ಯವಿರುವ ಕಡೆ ಮತಗಟ್ಟೆ ಕಟ್ಟಡಗಳ ಸ್ಥಳ ಹಾಗೂ ಹೆಸರು ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಹಾಗೂ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...