ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಬರ ಪರಿಸ್ಥಿತಿ, ಮಳೆ ಕೊರತೆ ಹಾಗೂ ರೈತರಿಗೆ ಕೈಗೊಳ್ಳಲಾಗುತ್ತಿರುವ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಬರದಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಉಪಸ್ಥಿತರಿದ್ದರು.



