ಕುಡಿದು ಗಲಾಟೆ ಮಾಡಿದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಯ ಸಂದೇಶ ໖໖.
ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ನಿಂಗಪ್ಪ ಪೂಜಾರಿ ಕುಡಿದು ಗಲಾಟೆ ಮಾಡಿದ ಆರೋಪ ಎದುರಿಸುತ್ತಿದ್ದ. ವಿಚಾರಣೆ ವೇಳೆ ನ್ಯಾಯಾಲಯದ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ, ನ್ಯಾಯಾಲಯವು 50 ಸಸಿಗಳನ್ನು ನೆಡುವಂತೆ ಆದೇಶಿಸಿದೆ.
ನ್ಯಾಯಾಲಯದ ಆದೇಶದಂತೆ ಅನಿಲ ಪೂಜಾರಿ ತನ್ನ ಪತ್ನಿಯೊಂದಿಗೆ ಸೇರಿ ಚಿಕ್ಕೋಡಿ ನ್ಯಾಯಾಲಯದ ಆವರಣದಲ್ಲಿ 25 ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ 25 ಸಸಿಗಳನ್ನು ನೆಟ್ಟಿದ್ದಾನೆ.
ಆರೋಪಿಗೆ ಪರಿಸರ ಸ್ನೇಹಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ಕ್ರಮ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.




