ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ನಿವಾಸಗಳು ಹಾಗೂ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿಯಾಗಿರುವ ವೈ. ಮಂಜುನಾಥ್ ಅವರು ಕಳೆದ ಹಲವು ವರ್ಷಗಳಿಂದ ಬೆಳಗಾವಿಯಲ್ಲಿ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ಹಣಕಾಸು ವ್ಯವಹಾರ, ಆಸ್ತಿ ದಾಖಲೆಗಳು ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ದಾಳಿ ಯಾವ ಪ್ರಕರಣಕ್ಕೆ ಸಂಬಂಧಿಸಿದೆ, ದಾಖಲೆಗಳು ಅಥವಾ ಯಾವುದೇ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆಯೇ ಎಂಬ ಕುರಿತು ಇ.ಡಿ.ಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.



