ಬೆಳಗಾವಿ | ದಿಲ್ಲಿ ಹೈಕೋರ್ಟ್‌ ವಿಚಾರಣೆ ಹೆಸರಿನಲ್ಲಿ ವೃದ್ಧೆಗೆ ₹15 ಲಕ್ಷ ಸೈಬ‌ರ್ ವಂಚನೆ

Date:

ದಿಲ್ಲಿ ಹೈಕೋರ್ಟ್ ವಿಚಾರಣೆ ಹೆಸರಿನಲ್ಲಿ 83 ವರ್ಷದ ವೃದ್ಧೆಯೊಬ್ಬರನ್ನು ಬೆದರಿಸಿ, ಸುಮಾರು ಹತ್ತು ದಿನಗಳ ಕಾಲ ವಿಡಿಯೊ ಕರೆ ಮೂಲಕ ನಿಗಾದಲ್ಲಿರಿಸಿ ₹15 ಲಕ್ಷ ವಂಚಿಸಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.

- Advertisement -

ಈ ಕುರಿತು ಬೆಳಗಾವಿ ನಗರದ ಭಾಗ್ಯನಗರ ನಿವಾಸಿ ವಿಜಯಾ ಉಪ್ಪಿನ (83) ಅವರು ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಗಳು ವಿಜಯಾ ಉಪ್ಪಿನ ಅವರಿಗೆ ಕರೆ ಮಾಡಿ ತಾವು ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶರು ಹಾಗೂ ತನಿಖಾ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಅವರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಸಹಕರಿಸಬೇಕೆಂದು ಹೇಳಿ ಮಾನಸಿಕ ಒತ್ತಡ ಸೃಷ್ಟಿಸಿದ್ದಾರೆ.

ನಂತರ ಸುಮಾರು ಹತ್ತು ದಿನಗಳ ಕಾಲ ನಿರಂತರ ವಿಡಿಯೊ ಕರೆ ಮೂಲಕ ಸಂಪರ್ಕದಲ್ಲಿರಿಸಿಕೊಂಡ ಆರೋಪಿಗಳು, ವೃದ್ಧೆಯ ಪ್ರತಿಯೊಂದು ಚಟುವಟಿಕೆಯನ್ನು ಗಮನಿಸುತ್ತಿದ್ದರು. ಇದೇ ವೇಳೆ ಬ್ಯಾಂಕ್‌ ಖಾತೆಗಳ ವಿವರ, ಸ್ಥಿರ ಠೇವಣಿಗಳು, ಉಳಿತಾಯ ಖಾತೆಗಳು ಹಾಗೂ ಮನೆಯಲ್ಲಿದ್ದ ಚಿನ್ನಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ವಿಚಾರಣೆ ನೆಪದಲ್ಲಿ ಭಯ ಹುಟ್ಟಿಸಿದ ವಂಚಕರು, ಬ್ಯಾಂಕ್‌ನಲ್ಲಿದ್ದ ಸ್ಥಿರ ಠೇವಣಿಗಳನ್ನು ತಕ್ಷಣ ಮುರಿದು ಹಣವನ್ನು ಸುರಕ್ಷತಾ ಪರಿಶೀಲನೆಗಾಗಿ ವರ್ಗಾಯಿಸಬೇಕೆಂದು ನಂಬಿಸಿದ್ದಾರೆ. ಅವರ ಮಾತುಗಳನ್ನು ನಂಬಿದ ವಿಜಯಾ ಉಪ್ಪಿನ ಅವರು ಬ್ಯಾಂಕ್‌ನಲ್ಲಿದ್ದ ಠೇವಣಿಗಳನ್ನು ಮುರಿದು, ಕಳೆದ ಏಪ್ರಿಲ್ 9ರಂದು ಒಟ್ಟು ₹15 ಲಕ್ಷವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್‌ ಖಾತೆಗೆ ವರ್ಗಾಯಿಸಿದ್ದಾರೆ.

ಹಣ ವರ್ಗಾವಣೆಯಾದ ಬಳಿಕವೂ ಕೆಲ ದಿನಗಳ ಕಾಲ ಸಂಪರ್ಕದಲ್ಲಿದ್ದ ಆರೋಪಿಗಳು, ನಂತರ ಸಂಪರ್ಕ ಕಡಿತಗೊಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ ವೃದ್ಧೆ ಸೈಬ‌ರ್ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬೆಳಗಾವಿ ನಗರ ಸೈಬ‌ರ್ ಅಪರಾಧ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ವಂಚಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...