ಬೆಳಗಾವಿ | ದಾರಿ ವಿಚಾರಕ್ಕೆ ವೈಷಮ್ಯ: ಯುವಕನ ಹತ್ಯೆ, ಆರೋಪಿ ಬಂಧನ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಮಹೇಶ ಬಸಯ್ಯ ಉಜನಿಮಠ (33) ಎಂಬಾತನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

- Advertisement -

ಮನೆಯ ಮುಂದೆ ಹಾಯ್ದಾಡುವ ದಾರಿಯ ವಿಚಾರವಾಗಿ ಉಂಟಾದ ವೈಷಮ್ಯದಿಂದಾಗಿ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಘಟನೆ ದಿನ ಮಹೇಶ ಮನೆಗೆ ಬರುವ ವೇಳೆ ಆರೋಪಿತನು ಕುಡಗೋಲಿನಿಂದ ಹಿಂದಿನಿಂದ ದಾಳಿ ನಡೆಸಿ ಕುತ್ತಿಗೆಗೆ ಗಂಭೀರ ಗಾಯಗೊಳಿಸಿದ್ದಾನೆ. ಪರಿಣಾಮವಾಗಿ ಮಹೇಶ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಕುರಿತು ದೊಡವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಪತ್ತೆ ಹಚ್ಚಿದ್ದಾರೆ. ಮಾರ್ಚ್‌ 18ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಡಿಎಸ್ಪಿ ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಹೆಚ್‌.ಕೆ ಪಾಟೀಲ ನೇತೃತ್ವದ ಪೊಲೀಸ್‌ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...