ಬೆಳಗಾವಿ | ಅಬಕಾರಿ ಭ್ರಷ್ಟಾಚಾರ ಪ್ರಕರಣ: ₹13.3 ಕೋಟಿ ಮೌಲ್ಯದ ಆಸ್ತಿ ವಶ

Date:

ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಪತಿ ಹಾಗೂ ಬೆಳಗಾವಿ ವಲಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ 14 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ₹13.3 ಕೋಟಿ ಮೌಲ್ಯದ ನಗದು, ಚಿನ್ನಾಭರಣ, ವಿದೇಶಿ ಕರೆನ್ಸಿ ಹಾಗೂ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.

- Advertisement -

24 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದಾಳಿ ವೇಳೆ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ, ₹3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ಕ್ಯಾಶ್ ಬುಕ್‌ಗಳು ಹಾಗೂ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಭ್ರಷ್ಟಾಚಾರದ ಆರೋಪ: 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಸೆಕ್ಷನ್-17ರ ಅಡಿಯಲ್ಲಿ ಈ ದಾಳಿ ನಡೆಸಲಾಗಿದೆ. ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ನಡೆದಿರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ಹೇಳಿದೆ.

ಲೋಕಾಯುಕ್ತ ಪೊಲೀಸರು ಕರ್ನಾಟಕ ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆ‌ರ್ ಆಧರಿಸಿ ತನಿಖೆ ಆರಂಭಿಸಲಾಗಿದ್ದು, ಅಬಕಾರಿ ಪರವಾನಗಿ ಮಂಜೂರು ಹಾಗೂ ನವೀಕರಣ ಪ್ರಕ್ರಿಯೆಯಲ್ಲಿ ಲಂಚ ಪಡೆದಿರುವ ಆರೋಪಗಳು ತನಿಖೆಯ ಕೇಂದ್ರಬಿಂದುವಾಗಿವೆ.

ಡೈರಿ ಪತ್ತೆ: ಶೋಧ ಕಾರ್ಯಾಚರಣೆಯಲ್ಲಿ ಅಬಕಾರಿ
ಅಧಿಕಾರಿಗಳಾದ ಜಗದೀಶ್‌ ನಾಯಕ್‌, ಕೆ.ಎಂ. ತಮ್ಮಣ್ಣ, ವೈ. ಮಂಜುನಾಥ್‌ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿವಿಧ ಮದ್ಯದಂಗಡಿಗಳಿಂದ ಪ್ರತಿ ತಿಂಗಳು ಲಂಚ ಪಡೆದಿರುವ ಬಗ್ಗೆ ಉಲ್ಲೇಖಿಸಿರುವ ಡೈರಿಯೊಂದು ಪತ್ತೆಯಾಗಿರುವುದು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಇದಲ್ಲದೆ, ಬೆನಾಮಿ ವ್ಯವಹಾರಗಳ ಮೂಲಕ ಕುಟುಂಬ ಸದಸ್ಯರು ಹಾಗೂ ಆಪ್ತರ ಹೆಸರಿನಲ್ಲಿ ಹೂಡಿಕೆ ಮಾಡಿ ಹಣ ವರ್ಗಾವಣೆ ನಡೆಸಿರುವ ದಾಖಲೆಗಳೂ ಲಭ್ಯವಾಗಿವೆ. ಲಂಚದ ರೂಪದಲ್ಲಿ ಪಡೆದ ಹಣವನ್ನು ವೈಯಕ್ತಿಕ ಬಳಕೆ, ಆಸ್ತಿ ಖರೀದಿ ಹಾಗೂ ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಸೂಚನೆ: ಇವು ಜಾರಿ ನಿರ್ದೇಶನಾಲಯ (ಇಡಿ)

ಪ್ರಕಟಿಸಿರುವ ಆರೋಪಗಳು ಮತ್ತು ತನಿಖೆಯ ಭಾಗವಾಗಿದ್ದು, ಪ್ರಕರಣದ ಕುರಿತು ಅಂತಿಮ ತೀರ್ಮಾನವನ್ನು ನ್ಯಾಯಾಲಯವೇ ಕೈಗೊಳ್ಳಲಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...