ಬೆಳಗಾವಿ | ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರಮೇಶ ಚಂದ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ: ಪ್ರಹ್ಲಾದ ಜೋಶಿ

Date:

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಹಾಗೂ ಎಂಎಸ್‌ಪಿ ದರವನ್ನು ₹60ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಕಬ್ಬು ಬೆಳೆಗಾರರ ಸಮಸ್ಯೆಗಳ ಅಧ್ಯಯನಕ್ಕಾಗಿ ನೀತಿ ಆಯೋಗದ ಮಾಜಿ ಅಧ್ಯಕ್ಷ ರಮೇಶ ಚಂದ್ ನೇತೃತ್ವದಲ್ಲಿ ವಿಶೇಷ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರು, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿರುವ ಪ್ರಹ್ಲಾದ ಜೋಶಿ ಅವರ ನಿವಾಸದತ್ತ ಪಾದಯಾತ್ರೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಅಕ್ಟೋಬರ್ 12ರಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ನೀಡಿದ್ದ ಭರವಸೆಯಂತೆ, ಎರಡು ದಿನಗಳೊಳಗೆ ವಿಶೇಷ ತಜ್ಞರ ಸಮಿತಿ ರಚಿಸಲಾಗಿದೆ. ಸಮಿತಿಯು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಅಧ್ಯಯನ ಮಾಡಿ ಸೂಕ್ತ ವರದಿ ಸಲ್ಲಿಸಲಿದೆ ಎಂದು ಜೋಶಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಪಾಡಲು ಹಾಗೂ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆ ಕೈಬಿಡಲು ಮನವಿ

ರೈತರಿಗೆ ಮನವಿ ಮಾಡಿರುವ ಪ್ರಹ್ಲಾದ ಜೋಶಿ, ಬಿಸಿಲಿನಲ್ಲಿ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ರೈತರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ಧವಿದೆ. ಆದ್ದರಿಂದ ರೈತರು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ, ಕಬ್ಬಿಗೆ ₹5,500 ಬೆಲೆ ನಿಗದಿ ಹಾಗೂ ಎಂಎಸ್‌ಪಿ ದರವನ್ನು ₹60ಕ್ಕೆ ಹೆಚ್ಚಿಸುವಂತೆ ಆಗ್ರಹಿಸುತ್ತಿರುವ ರೈತರ ಬೇಡಿಕೆಗಳು ಈಡೇರುತ್ತವೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ. ತಜ್ಞರ ಸಮಿತಿ ರಚನೆಯಿಂದ ರೈತರ ಹೋರಾಟಕ್ಕೆ ಪರಿಹಾರ ಸಿಗಲಿದೆಯೇ ಅಥವಾ ಹೋರಾಟ ಮುಂದುವರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಬೆಳಗಾವಿ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...