ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನರ್ಸ್ ವೇಷ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಸನಾ ಶೇಖ್ ಎಂಬ ಯುವತಿ ಕಳೆದ ಮೂರು ತಿಂಗಳಿಂದ ಬಿಮ್ಸ್ನಲ್ಲಿ ತರಬೇತಿಗೆ ಬಂದಿರುವಂತೆ ಹೇಳಿಕೊಂಡು ಚಿಕಿತ್ಸೆ ನೀಡುತ್ತಿದ್ದಾಳೆ. ಆದರೆ ಅಧಿಕೃತ ದಾಖಲೆಗಳಲ್ಲಿ ಆಕೆಯ ನೇಮಕಾತಿ ನಡೆದಿಲ್ಲ ಎಂದು ತಿಳಿದುಬಂದಿದೆ.
ಆಸ್ಪತ್ರೆಯೊಂದರ ಮುಖ್ಯಸ್ಥರ ಸಹಕಾರದಿಂದಲೇ ಯುವತಿ ಈ ಅಕ್ರಮ ನಡೆಸುತ್ತಿದ್ದಾಳೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಜಿಕಲ್ ವಾರ್ಡ್ ಹಾಗೂ ಶಸ್ತ್ರಚಿಕಿತ್ಸಾ ಘಟಕದಲ್ಲಿಯೂ ಆಕೆ ನೇರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಬಿಮ್ಸ್ ನಿರ್ದೇಶಕರು ಹಾಗೂ ಸರ್ಜನ್ಗಳು ಯುವತಿಯ ವಿಚಾರಣೆ ನಡೆಸಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಯುತ್ತಿದೆ.