ಬೆಳಗಾವಿ | ಕುಟುಂಬ ಕಲಹ: ಅತ್ತೆಗೆ ಚಾಕು ಹಾಕಿದ ಅಳಿಯ

Date:

ಕುಟುಂಬ ಕಲಹದ ಹಿನ್ನೆಲೆ ಅತ್ತೆಯ ಮೇಲೆ ಅಳಿಯ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಸಂಭವಿಸಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

- Advertisement -

ಗಾಯಗೊಂಡವರು ಮಹಾದೇವಿ ಕರಿಗಾರ (45) ಎಂದು ಗುರುತಿಸಲ್ಪಟ್ಟಿದ್ದು, ಆರೋಪಿ ಅರವಿಂದ ಗವಳಿ (26) ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಮಾಹಿತಿಯ ಪ್ರಕಾರ, ಒಂದೂವರೆ ವರ್ಷದ ಹಿಂದೆ ಮಹಾದೇವಿ ಅವರ ಮಗಳನ್ನು ಅರವಿಂದನೊಂದಿಗೆ ವಿವಾಹ ಮಾಡಲಾಗಿತ್ತು. ಎರಡು ತಿಂಗಳ ಹಿಂದೆ ಮಗಳಿಗೆ ಹೆರಿಗೆಯಾಗಿದ್ದು, ಆಕೆ ತವರು ಮನೆಯಲ್ಲಿ ವಾಸವಾಗಿದ್ದಳು. ಈ ನಡುವೆ ಅರವಿಂದ ತನ್ನ ಪತ್ನಿಗೆ ಪದೇಪದೇ ವಿಡಿಯೋ ಕಾಲ್ ಮಾಡಿ ಮಗುವನ್ನು ತೋರಿಸುವಂತೆ ಒತ್ತಾಯ ಮಾಡುತ್ತಿದ್ದನು.

ಮನೆಯ ಕೆಲಸಗಳಲ್ಲಿ ನಿರತರಾಗಿದ್ದ ಕಾರಣ ನಿರಂತರವಾಗಿ ಮೊಬೈಲ್‌ ಬಳಸಲು ಸಾಧ್ಯವಿಲ್ಲ ಎಂದು ಮಹಾದೇವಿ ತಿಳಿಸಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಅರವಿಂದ ಅವಾಚ್ಯವಾಗಿ ನಿಂದನೆ ನಡೆಸಿದ್ದಾನೆ ಎನ್ನಲಾಗಿದೆ.

Advertisements

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೋಪಗೊಂಡ ಅರವಿಂದ, ಸೇಡು ತೀರಿಸಿಕೊಳ್ಳಲು ಮಹಾದೇವಿ ಮನೆಗೆ ಬಂದು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಗಾಯಗೊಂಡ ಮಹಾದೇವಿಯನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಮುರಗೋಡ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...