ಬೆಳಗಾವಿ ಜಿಲ್ಲೆಯ ಹಂದಿಗುಂದ ಗ್ರಾಮದ ಮನೆಯಲ್ಲಿ ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮುತ್ತಪ್ಪ ಲಕ್ಕಪ್ಪ ಮೇತ್ರಿ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ, ಫೆ.11ರಂದು ಪತಿ-ಪತ್ನಿ ಮಧ್ಯೆ ಜಗಳವಾಗಿತ್ತು. ಆ ಸಂದರ್ಭದಲ್ಲಿ ಹಲ್ಲೆಗೊಳಗಾದ ಪತ್ನಿ ಮೂಡಲಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಮುತ್ತಪ್ಪ, ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಭಾನುವಾರ ಮನೆಗೆ ಮರಳಿದ್ದರು. ನಂತರ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಹಾರೂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.