ಬೆಳಗಾವಿ | ಹೊಲದ ದಾರಿ ವ್ಯಾಜ್ಯಕ್ಕೆ ಬಲಿ: ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನ

Date:

ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ ಗುಡದಪ್ಪನವರ (45) ಕೊಲೆಯಾದ ವ್ಯಕ್ತಿ. ಜಮೀನಿನ ವ್ಯಾಜ್ಯದ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಅದೇ ಗ್ರಾಮದ ಪ್ರಧಾನಪ್ಪ ದುರ್ಗಪ್ಪ ಪಾತ್ರೋಟ ಹಾಗೂ ರಮೇಶ ಕಾಮಪ್ಪ ಮೇತ್ರಿ ಟಾವೆಲ್‌ನಿಂದ ಉಸಿರುಗಟ್ಟಿಸಿ, ಬಳಿಕ ತಲೆಗೆ ಆಯುಧದಿಂದ ಬಲವಾಗಿ ಹೊಡೆದು ಕೊಲೆ ಮಾಡಿರುವುದಾಗಿ ಮೃತರ ಪತ್ನಿ ಲಕ್ಷ್ಮವ್ವ ಗುಡದಪ್ಪನವರ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಕಟಕೋಳ ಪೊಲೀಸರು ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಡಿಎಸ್‌ಪಿ ಚಿದಂಬರ ಮಡಿವಾಳರ ಹಾಗೂ ಸಿಪಿಐ ವಿನಾಯಕ ಬಡಿಗೇರ ಅವರ ನೇತೃತ್ವದಲ್ಲಿ ಪಿಎಸ್‌ಐ ಬಸವರಾಜ ಕೊಣ್ಣೂರೆ, ಪ್ರೊಬೇಷನರಿ ಪಿಎಸ್‌ಐ ಅನ್ನಪೂರ್ಣ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಬಿ.ವಿ. ಹುಲಕುಂದ, ಎಸ್.ಎಸ್. ವಜ್ರಮಟ್ಟಿ, ಎಂ.ಸಿ. ಮನ್ನಿಕೇರಿ, ವೈ.ಜಿ. ಕೋಟಿ, ಆ‌ರ್.ವಿ. ಸೊಟನಾಳ, ಆ‌ರ್.ಬಿ. ಗೋಕಾಕ, ಡಿ.ಎಚ್. ನಧಾಫ, ಬಿ.ಎಸ್‌. ಚುಂಚನೂರ, ಬಿ.ಎಚ್. ಪಾಟೀಲ, ಎಂ.ಎಸ್. ನಂದಿ, ಜಿ.ಎನ್. ಇಂಚಲ, ವಿನೋದ ಠಕ್ಕನ್ನವರ ಮತ್ತು ಸಚೀನ ಪಾಟೀಲ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕಟಕೋಳ ಪೊಲೀಸರು ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬಿಲ್ 15 ದಿನಗಳಲ್ಲಿ ಪಾವತಿಸಿ; ವಿಳಂಬವಾದರೆ ಬಡ್ಡಿ ನೀಡಿ

ಬೆಳಗಾವಿ ಕಬ್ಬು ಪೂರೈಸಿದ 15 ದಿನಗಳೊಳಗೆರೈತರಿಗೆ ಬಿಲ್‌ ಪಾವತಿಸಬೇಕು. ವಿಳಂಬವಾದರೆ ಬಡ್ಡಿ...

ಬೆಳಗಾವಿ | ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಬೆಳಗಾವಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡಿದರೆ ಸಾಲದು, ಸರ್ಕಾರ...

ಬೆಳಗಾವಿ | ಕಬ್ಬು ಬೆಲೆ ವಿವಾದಕ್ಕೆ ಅಂತಿಮ ತೀರ್ಮಾನವಿಲ್ಲ; ಅ. 29ಕ್ಕೆ ಮತ್ತೊಂದು ಸಭೆ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...