ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ ರಾಶಿ ಕಾಯುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

- Advertisement -

ಮದ್ಲೂರು ಗ್ರಾಮದ ಕೇದಾರಪ್ಪ ಬಸಪ್ಪ ಗುರ್ಲಹೊಸೂರ (47) ಹಾಗೂ ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ಅವರು ಶ್ರೀರಂಗಪೂರ ಹದ್ದಿಯಲ್ಲಿರುವ ತಮ್ಮ ಜಮೀನಿನ ಸರ್ವೇ ನಂ. 378ರಲ್ಲಿ ಮೆಕ್ಕೆಜೋಳವನ್ನು ಯಂತ್ರದ ಮೂಲಕ ಒಡೆಸಿ, ರಾಶಿ ಕಾಯಲು ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ರಾತ್ರಿ ಸುಮಾರು 1ರಿಂದ 3 ಗಂಟೆಯ ಅವಧಿಯಲ್ಲಿ ಈ ಭಾಗದಲ್ಲಿ ಅತಿಯಾದ ಮಳೆ ಹಾಗೂ ಸಿಡಿಲು ಸಂಭವಿಸಿದ್ದು, ಸಿಡಿಲು ಬಡಿದ ಪರಿಣಾಮ ಕೇದಾರಪ್ಪ ಬಸಪ್ಪ ಗುರ್ಲಹೊಸೂರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಕುರಿತು ತಹಶೀಲ್ದಾರ್ ಎಂ.ವಿ. ಗುಂಡಪ್ಪಗೋಳ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮುರಗೋಡ ಸಿಪಿಐ ಐ.ಎಂ. ಮಠಪತಿ ಹಾಗೂ ಯರಗಟ್ಟಿ ಪೊಲೀಸ್‌ ಠಾಣೆಯ ಪಿಎಸ್‌ಐ ಎಲ್.ಬಿ. ಮಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...