ಬೆಳಗಾವಿ | ಬರ ಪರಿಹಾರ ₹2,500ಕ್ಕೆ ರೈತರ ಆಕ್ರೋಶ ₹100 ಸೇರಿಸಿ ಸರ್ಕಾರಕ್ಕೇ ವಾಪಸ್: ರೈತ ಮುಖಂಡ ಶಶಿಕಾಂತ ಗುರೂಜಿ

Date:

ಬರಗಾಲ ಪರಿಹಾರವಾಗಿ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಮೊತ್ತವನ್ನು ರೈತ ಮುಖಂಡ ಶಶಿಕಾಂತ ಗುರೂಜಿ ತೀವ್ರವಾಗಿ ವಿರೋಧಿಸಿದ್ದಾರೆ. ಸರ್ಕಾರ ನೀಡುತ್ತಿರುವ ಪರಿಹಾರಕ್ಕೆ ರೈತರು ತಮ್ಮ ಕಡೆಯಿಂದ ಇನ್ನೂ ₹100 ಸೇರಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರಿಗೆ ನೀಡುವುದಾಗಿ ವ್ಯಂಗ್ಯವಾಗಿ ಹೇಳಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಸೆ.29ರಂದು ಕೇಂದ್ರ ಸಚಿವ ಪ್ರಲ್ಲಾದ್‌ ಜೋಶಿ ಅವರ ಮನೆ ಮುತ್ತಿಗೆ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಪರಿಹಾರ ರೈತರಿಗೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಬರಪೀಡಿತ ಎಂದು ಘೋಷಿಸಿರುವ ತಾಲೂಕುಗಳ ರೈತರ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಸೂಕ್ತ ಬೆಂಬಲ ಬೆಲೆ ಕಲ್ಪಿಸುವುದರ ಜೊತೆಗೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿ ನಿರಂತರ ವಿದ್ಯುತ್‌ ಪೂರೈಸಬೇಕು ಎಂದು ಅವರು ಆಗ್ರಹಿಸಿದರು.

ವಿಧಾನಸಭೆಯ ಅಧಿವೇಶನದಲ್ಲಿ ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆ ನಡೆಯಬೇಕಿತ್ತು. ಆದರೆ, ಸರ್ಕಾರದ ಗಮನ ಬೇರೆ ವಿಚಾರಗಳತ್ತ ಹೆಚ್ಚು ಕೇಂದ್ರೀಕೃತವಾಗಿದೆ ಎಂದು ಅವರು ಟೀಕಿಸಿದರು. “ವಿಧಾನಸೌಧ ರಾಜಕಾರಣಿಗಳ ಮನೆಯಲ್ಲ; ಅದು ಶಾಸನಸಭೆ. ಇದರ ಜವಾಬ್ದಾರಿಯನ್ನು ಎಲ್ಲ ರಾಜಕಾರಣಿಗಳು ಅರ್ಥಮಾಡಿಕೊಳ್ಳಬೇಕು,” ಎಂದು ಹೇಳಿದರು.

ಉತ್ತರ ಕರ್ನಾಟಕಕ್ಕೆ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸಬೇಕು. ಪ್ರತಿ ವರ್ಷ ಜುಲೈ 21ರಂದು ರೈತ ಹುತಾತ್ಮ ದಿನ ಆಚರಿಸಲಾಗುತ್ತಿದ್ದು, ಇಡೀ ಕರ್ನಾಟಕವನ್ನು ಬರಪೀಡಿತ ರಾಜ್ಯವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

“ಸರ್ಕಾರದ ಬಳಿ ರೈತರಿಗೆ ಸೌಲಭ್ಯ ಕಲ್ಪಿಸಲು ಹಣದ ಕೊರತೆ ಇದ್ದರೆ, ರೈತರಿಂದಲೇ ಸರ್ಕಾರಕ್ಕೆ ಸಾಲ ನೀಡುವ ಕೆಲಸ ಮಾಡುತ್ತೇವೆ,” ಎಂದು ಶಶಿಕಾಂತ ಗುರೂಜಿ ಸವಾಲು ಹಾಕಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು...