ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ ತಕ್ಷಣವೇ ಪಾವತಿಸಬೇಕೆಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ರೈತರು ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರೈತರು, ಕಬ್ಬು ಪೂರೈಕೆಯಾದ 15 ದಿನಗಳೊಳಗೆ ಬಿಲ್ ಪಾವತಿಸಬೇಕು ಎಂಬ ನಿಯಮವಿದ್ದರೂ ಅನೇಕ ಕಾರ್ಖಾನೆಗಳು ಅದನ್ನು ಪಾಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರವು ಈ ಬಗ್ಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಸರ್ಕಾರದ ಆದೇಶದಂತೆ ರೈತರಿಗೆ ನಿಗದಿತ ದರವನ್ನು ನೀಡಬೇಕು. ಆದೇಶ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ರೈತರು ಒತ್ತಾಯಿಸಿದರು.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮನೆ ಕಳ್ಳತನ: ₹64 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಕಮತ ಮಾತನಾಡಿ, ಸುಮಾರು ₹3,500 ಕೋಟಿ ಬಾಕಿ ಉಳಿದಿರುವ ಕಬ್ಬಿನ ಬಿಲ್ ಅನ್ನು ಶೀಘ್ರ ಪಾವತಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮತ್ತು ಸಕ್ಕರೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.



