ಬೆಳಗಾವಿ : ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

Date:

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಬೇಡಿಕೆಯಿಂದಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತನಿಖೆ ವಿಳಂಬಗೊಳಿಸುತ್ತಿರುವ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮಹಾಸಂಘದ ಸಂಸ್ಥಾಪಕ ಅಧ್ಯಕ್ಷ ಬೀರಪ್ಪ ದೇಶನೂರ ಅವರು, “2017ರಿಂದ 2023ರವರೆಗೆ ಮಾತ್ರ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಆದರೆ 2024 ಮತ್ತು 2025ರಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆದಿದ್ದು, ಅದನ್ನು ಮುಚ್ಚಿಹಾಕಲು ಪ್ರಯತ್ನವಾಗುತ್ತಿದೆ. ಹೀಗಾಗಿ ಈ ಅವಧಿಯ ತನಿಖೆಯೂ ಅಗತ್ಯ. ನಿಷ್ಪಕ್ಷಪಾತ ತನಿಖೆ ನಡೆಯಬೇಕು, ತಪ್ಪಿತಸ್ಥರನ್ನು ಕಾನೂನಿನ ಮುಂದಿಡಬೇಕು” ಎಂದು ಆಗ್ರಹಿಸಿದರು.

ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಾರ್ಖಾನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರೂ, ತನಿಖೆ ಕಾರ್ಖಾನೆ ಪರವಾಗಿ ಸಾಗುತ್ತಿದೆ ಎಂಬ ಆರೋಪ ಪ್ರತಿಭಟನಾಕಾರರಿಂದ ಕೇಳಿಬಂದಿತು.

ರೈತರು ಸರ್ಕಾರ ತಕ್ಷಣವೇ ಆದೇಶ ಹೊರಡಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...