ಬೆಳಗಾವಿ | ಹತ್ತರಗಿ ಟೋಲ್ ಬಂದ್‌ ಮಾಡಿ ರೈತರ ಪ್ರತಿಭಟನೆ; ಪ್ರಹ್ಲಾದ ಜೋಶಿ ವಿರುದ್ಧ ಆಕ್ರೋಶ

Date:

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಎಂಎಸ್‌ಪಿ ದರ ₹60ಕ್ಕೆ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರಾದ ಶಶಿಕಾಂತ ಗುರೂಜಿ ಮತ್ತು ಚೂನಪ್ಪ ಪೂಜೇರಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಬಂದ್‌ ಮಾಡಿ ರೈತರು ಪ್ರತಿಭಟನೆ ನಡೆಸಿದರು.

- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ನಾಯಕ ಶಶಿಕಾಂತ ಗುರೂಜಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರೈತರನ್ನು ದೆಹಲಿಗೆ ಕರೆಸಿಕೊಂಡು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ರೈತರ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. 2029ರ ಚುನಾವಣೆಯಲ್ಲಿ ಜನರು ನಿಮಗೆ ಪಾಠ ಕಲಿಸಲಿದ್ದಾರೆ. ಕಬ್ಬಿಗೆ ನ್ಯಾಯಯುತ ಬೆಲೆ ಹಾಗೂ ಎಂಎಸ್‌ಪಿ ದರ ₹60ಕ್ಕೆ ನಿಗದಿಪಡಿಸುವ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.

ಈ ಹೋರಾಟದ ಬಳಿಕ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಹೋರಾಟ ನಡೆಸಲಾಗುವುದು. ಹುಬ್ಬಳ್ಳಿಗೆ ಮಹದಾಯಿ ನೀರು ಹರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ರೈತರ ವಿರುದ್ಧ ಕಾಮೆಂಟ್ ಮಾಡಿದವರಿಗೆ ಎಚ್ಚರಿಕೆ

ರೈತ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಹ್ಲಾದ ಜೋಶಿ ಬೆಂಬಲಿಗರ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದರು. ರೈತರ ವಿರುದ್ಧ ಕಾಮೆಂಟ್ ಮಾಡುವುದನ್ನು ಮುಂದುವರಿಸಿದರೆ ಮನೆಗಳಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಯುವಕ ಆತ್ಮಹತ್ಯೆ ಯತ್ನ

ಪ್ರಹ್ಲಾದ ಜೋಶಿ ಅವರು ರೈತರನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿ ಉಡಾಫೆಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಹತ್ತರಗಿ ಟೋಲ್ ನಾಕಾದಲ್ಲಿ ರಕ್ಷ್ಮಿಕಾಂತ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...