ಬೆಳಗಾವಿ | ಸಾಗುವಳಿ ಭೂಮಿಯ ಹಕ್ಕುಪತ್ರ ನೀಡುವಂತೆ ರೈತರ ಹೋರಾಟ

Date:

Advertisements

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಒಂಬತ್ತು ಗ್ರಾಮಗಳು ಸೇರಿದಂತೆ ಕುಲವಳ್ಳಿ ʼಸಾಗುವಳಿ ಭೂಮಿಯ ಹಕ್ಕುಪತ್ರʼ ನೀಡುವಂತೆ ರೈತರು ಕೈಗೆತ್ತಿಕೊಂಡಿರುವ ಆಹೋರಾತ್ರಿ ಹೋರಾಟವನ್ನು ಕೈ ಬಿಡುವಂತೆ ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮಾಡಿದ್ದಾರೆ.

ಕಿತ್ತೂರು ತಾಲೂಕಿನ ತಹಶೀಲ್ದಾರ್ ಕಚೇರಿಯ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟ ಅಹೋರಾತ್ರಿ ಹೋರಾಟವನ್ನು ಉದ್ದೇಶಿಸಿ ಶಾಸಕ ಬಾಬಾಸಾಹೇಬ ಪಾಟಿಲ್ ಮಾತನಾಡಿ, “ಕುಲವಳ್ಳಿ ಸಾಗುವಳಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗಮನಕ್ಕೆ ತರಲಾಗಿದೆ. ಸಚಿವರು ಜಿಲ್ಲಾಧಿಕಾರಿ ಜತೆಗೆ ಚರ್ಚೆ ಮಾಡಿದ್ದಾರೆ. ಇದಕ್ಕೆ ಸಮಯ ಬೇಕಾಗುತ್ತದೆ. ಸಚಿವರೂ ಕೂಡಾ ರೈತರ ಸಾಗುವಳಿ ಭೂಮಿಯನ್ನು ಮತ್ತೊಮ್ಮೆ ಸರ್ವೇ ಮಾಡಿಸಿ ಪಿಟಿ ಶೀಟ್ ನಕ್ಷೆ ನೀಡುವಂತೆ ತಿಳಿಸಿದ್ದಾರೆ” ಎಂದರು.

“ರೈತರಿಗೆ ಯಾವುದೇ ತೊಂದರೆ ನೀಡಿಲು ಬಿಡುವುದಿಲ್ಲ. ನಿಮ್ಮ ಸಾಗುವಳಿ ಭೂಮಿಯನ್ನು ಮೊದಲಿನಂತೆ ಉಳುಮೆ ಮಾಡಿಕೊಂಡು ಜೀವನ ಸಾಗಿಸಿ. ನಿಮ್ಮಗೆ ಎಲ್ಲ ರೀತಿ ಸಹಕಾರ ನೀಡುತ್ತೇನೆ” ಎಂದರು.

Advertisements

ರೈತ ಹೋರಾಟಗಾರ್ತಿ ನಾಗರತ್ನ ಪಾಟೀಲ ಮಾತನಾಡಿ, “ರೈತರು ಹಲವು ದಿನಗಳಿಂದ ಅನಿರ್ದಿಷ್ಟ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ರೈತರ ಸಮಸ್ಯೆ ಕೇಳುವ ಪ್ರಯತ್ನ ಮಾಡುತ್ತಿಲ್ಲ. ಆಗಿನ ಸಚಿವ ಕಾಗೋಡು ತಿಮ್ಮಪ್ಪನವರು ರೈತರಿಗೆ ಪಿಟಿ ಶೀಟ್ ನಕ್ಷೆ ನೀಡಿದ್ದಾರೆ. ಅದರ ಆಧಾರದ ಮೇಲೆ ಪಹಣಿ ಪತ್ರದಲ್ಲಿ ರೈತರ ಹೆಸರು ದಾಖಲಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಬಂದು ರೈತರಿಗೆ ಅಧಿಕೃತವಾಗಿ ಭರವಸೆ ಕೊಡಬೇಕು. ಅಲ್ಲಿಯವರೆಗೆ ಅನಿರ್ದಿಷ್ಟಾವಧಿ ಹೋರಾಟವನ್ನು ಕೈ ಬಿಡುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘದ ಅಧ್ಯಕ್ಷ ಎಂ ಎಫ್ ಜಕಾತಿ, ಪ್ರಧಾನ ಕಾರ್ಯದರ್ಶಿ ಅಪ್ಪೇಶ ದಳವಾಯಿ, ಕಿಶೋ‌ರ್ ಮಿಠಾರಿ ಮಾತನಾಡಿದರು. ವಿಜಯಕುಮಾರ ಶಿಂಧೆ, ದಶರಥ ಮಡಿವಾಳರ, ಸೋಮಯ್ಯ ನಿಂಗಾಪೂರಮಠ, ತವನಪ್ಪ ಬೇಟಗೇರಿ, ಮಾರುತಿ ಕಲ್ಲೂರಿ, ತೋಪಿಕ್‌ ಸುತಗಟ್ಟಿ, ಸುರೇಶ ಮಡಿವಾಳರ, ಕಸ್ತೂರಿ ಮಾಳನ್ನವರ, ಕಮಲವ್ವ ಕಡಕೋಳ, ಸಾವಕ್ಕ ತೊಟಗಿ, ಮಂಜುಳಾ ಕಡ್ಡೆನ್ನವರ ಸೇರಿದಂತೆ ಅನೇಕ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X