ಬೆಳಗಾವಿ : ಕಬ್ಬು ದರ ₹3500 ನಿಗದಿಗಾಗಿ ನವೆಂಬರ್ 7ರಿಂದ ಅನಿರ್ಧಿಷ್ಟ ಆಮರಣ ಉಪವಾಸ ರೈತರಿಂದ ಸರ್ಕಾರಕ್ಕೆ ಎಚ್ಚರಿಕೆ

Date:

ಪ್ರಸಕ್ತ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಾಗಾಣಿಕೆ ಮತ್ತು ಕಟಾವು ವೆಚ್ಚವನ್ನು ಹೊರತುಪಡಿಸಿ ಪ್ರತಿಟನ್ ಕಬ್ಬು ದರ ರೂ.3500/- ನಿಗದಿಪಡಿಸುವಂತೆ ಆಗ್ರಹಿಸಿ, ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹಾಗೂ ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರ ಅಂಬಲಿ ಅವರ ನೇತೃತ್ವದಲ್ಲಿ ರೈತರು ನವೆಂಬರ್ 7ರಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟ ಆಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ.

- Advertisement -

ಸರ್ಕಾರವು ರೈತರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನಲೆಯಲ್ಲಿ ಈ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, “ರೈತರ ಪರವಾಗಿ ಪ್ರಸ್ತುತ ಸಾಲಿನ ಕಬ್ಬು ದರ ರೂ.3500/- ನಿಗದಿಪಡಿಸಬೇಕು ಹಾಗೂ ಗೋವಿನ ಜೋಳ ಖರೀದಿ ಕೇಂದ್ರವನ್ನು ಕೂಡಲೇ ಪ್ರಾರಂಭಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ರೈತರು ಕಬ್ಬು ಧಾರಣಿ ನಿಗದಿಗಾಗಿ ಹಗಲಿರುಳು ಹೋರಾಟ ನಡೆಸುತ್ತಿರುವಾಗ, ಹೋರಾಟದ ವೇದಿಕೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. “ರೈತರ ಹೋರಾಟದ ವೇದಿಕೆಯನ್ನು ರಾಜಕೀಯ ವೇದಿಕೆಯಾಗಿಸಬಾರದು. ಮೊದಲು ಬಿಜೆಪಿ ನಾಯಕರ ಒಡೆತನದ ಸಕ್ಕರೆ ಕಾರ್ಖಾನೆಗಳು ಕಬ್ಬು ದರ ಘೋಷಿಸಲಿ” ಎಂದು ರೈತರು ಕಿಡಿಕಾರಿದ್ದಾರೆ.

ಸರ್ಕಾರ ಅಧಿಕಾರ ಹಂಚಿಕೆ ಕಾಳಗದಲ್ಲಿ ತೊಡಗಿಕೊಂಡಿದ್ದು, ರೈತರ ಬದುಕುಮಟ್ಟದ ಪ್ರಶ್ನೆ ಕಡೆಗಣಿಸಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. “ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು ರೈತರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ,” ಎಂದು ಅವರು ಹೇಳಿದರು.

ರೈತರ ಹೋರಾಟಕ್ಕೆ ರೈತಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು, ಕನ್ನಡಪರ ಸಂಘಟನೆಗಳು, ಮಹಿಳಾ ಹಾಗೂ ಯುವ ಸಂಘಟನೆಗಳು ಬೆಂಬಲ ನೀಡುವಂತೆ ಕೋರಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...