ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪ

Date:

ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಅವರ ಮೇಲೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -

ಕೆಲಸದ ಸಂಬಂಧ ಶಾಸಕರ ಮನೆಗೆ ತೆರಳಿದ್ದ ವೇಳೆ, “ನಮ್ಮ ಮನೆಗೆ ಏಕೆ ಬಂದೆ” ಎಂದು ಪ್ರಶ್ನಿಸಿ ತಲೆ ಒಡೆಯುವಂತೆ ಹಲ್ಲೆ ನಡೆಸಲಾಗಿದೆ ಎಂದು ನಿಂಗಪ್ಪ ಕರೆಣ್ಣವರ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆ ನಡೆದ ತಕ್ಷಣ ಶಾಸಕ ಲಕ್ಷ್ಮಣ ಸವದಿ ಅವರ ಮನೆ ಸಮೀಪದಿಂದಲೇ ಗಾಯಗೊಂಡ ನಿಂಗಪ್ಪ ಕರೆಣ್ಣವರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ರಾಜಕೀಯ ಹಾಗೂ ಕಾರ್ಮಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರಕರಣ ಸಂಬಂಧ ಪೊಲೀಸ್ ತನಿಖೆ ಆರಂಭವಾಗುವ ನಿರೀಕ್ಷೆಯಿದೆ.

ಈ ಕುರಿತು ಶಾಸಕ ಲಕ್ಷ್ಮಣ ಸವದಿ ಅಥವಾ ಅವರ ಪುತ್ರ ಚಿದಾನಂದ ಸವದಿ ಅವರಿಂದ ಇನ್ನಷ್ಟೇ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...