ಬೆಳಗಾವಿ | ಸೀಟ್ ವಿಚಾರಕ್ಕೆ ಪ್ರಯಾಣಿಕರ ನಡುವೆ ಮಾರಾಮಾರಿ

Date:

ಬಸ್‌ನಲ್ಲಿ ಸೀಟ್ ಕಾಯ್ದಿರಿಸುವ ವಿಚಾರಕ್ಕೆ ಇಬ್ಬರು ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದ ಮಾರಾಮಾರಿಗೆ ತಿರುಗಿದ ಘಟನೆ ಬೆಳಗಾವಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ.

- Advertisement -

ಬೆಳಗಾವಿಯಿಂದ ಬೈಲಹೊಂಗಲಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಕ್ಕಳಿಗಾಗಿ ವ್ಯಕ್ತಿಯೊಬ್ಬರು ಮುಂಚಿತವಾಗಿ ಬ್ಯಾಗ್ ಇಟ್ಟು ಸೀಟ್ ಕಾಯ್ದಿರಿಸಿದ್ದರು. ಆದರೆ ಮತ್ತೊಬ್ಬ ಪ್ರಯಾಣಿಕ ಬ್ಯಾಗ್‌ ತೆಗೆದು ಅದೇ ಸೀಟ್‌ನಲ್ಲಿ ಕುಳಿತಿದ್ದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಮೊದಲೇ ಬ್ಯಾಗ್‌ ಇಟ್ಟು ಸೀಟ್ ಹಿಡಿದಿದ್ದೆ. ನನ್ನ ಬ್ಯಾಗ್ ತೆಗೆದು ನೀನು ಯಾಕೆ ಕುಳಿತೆ?’ ಎಂದು ಪ್ರಶ್ನಿಸಿದ ವ್ಯಕ್ತಿ, ಮತ್ತೊಬ್ಬ ಪ್ರಯಾಣಿಕನೊಂದಿಗೆ ವಾಗ್ವಾದ ನಡೆಸಿದರು. ಕೆಲವೇ ಕ್ಷಣಗಳಲ್ಲಿ ವಾಗ್ವಾದ ತಾರಕಕ್ಕೇರಿ ಇಬ್ಬರೂ ಕೈಕೈ ಮಿಲಾಯಿಸಿಕೊಂಡರು.

ಗಲಾಟೆ ಬಿಡಿಸಲು ಕೆಲವರು ಮುಂದಾದ ವೇಳೆ, ಪತಿಯೊಬ್ಬ ತನ್ನ ಪತ್ನಿಯ ಮೇಲೆಯೇ ಕೈ ಮಾಡಿದ ಘಟನೆಯೂ ನಡೆದಿದೆ. ಇದರಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬಳಿಕ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...