ಬೆಳಗಾವಿ | ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ತಲ್ವಾರ್, ಚಾಕುವಿನಿಂದ ಹಲ್ಲೆ: ಐವರ ಬಂಧನ

Date:

ಯುವತಿಯೊಂದಿಗಿನ ಸಲುಗೆಯ ವಿಚಾರವಾಗಿ ಆರಂಭವಾದ ವೈಮನಸ್ಸು ಎರಡು ಗುಂಪುಗಳ ನಡುವಿನ ತೀವ್ರ ಸಂಘರ್ಷಕ್ಕೆ ತಿರುಗಿದ್ದು, ತಲ್ವಾ‌ರ್ ಹಾಗೂ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ವಡಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ತರುಣ ಜಾಲಗಾರ (20), ಪ್ರೇಮ ಜಾಲಗಾರ (26), ಆದಿತ್ಯ ಪೂಜಾರಿ (20), ಪ್ರಶಾಂತ ಜಾಲಗಾರ (26) ಹಾಗೂ ಮಾರುತಿ ಮಂಜಾಲಕರ (23) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಮೈದಾನವೊಂದರಲ್ಲಿ ಸಂಧಾನ ಮಾತುಕತೆ ನಡೆಯುತ್ತಿದ್ದ ವೇಳೆ ಪರಿಸ್ಥಿತಿ ಏಕಾಏಕಿ ಉದ್ವಿಗ್ನಗೊಂಡಿದೆ. ಈ ಸಂದರ್ಭದಲ್ಲಿ ಕೇತನ್ ಮೇಲೆ ಹಲ್ಲೆ ನಡೆಸಲು ಆರೋಪಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಕೇತನ್‌ನನ್ನು ರಕ್ಷಿಸಲು ಮಧ್ಯಪ್ರವೇಶಿಸಿದ ಆತನ ಸ್ನೇಹಿತರ ಮೇಲೂ ತಲ್ವಾ‌ರ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಯುವತಿಯ ವಿಚಾರವಾಗಿ ಆರಂಭವಾದ ಮನಸ್ತಾಪ ಕೊನೆಗೆ ಹಿಂಸಾತ್ಮಕ ಸಂಘರ್ಷಕ್ಕೆ ಕಾರಣವಾಗಿದ್ದು, ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಕೇತನ್ ಬಬನ್‌ ಅವರು ಶಹಾಪುರ ಪೊಲೀಸ್‌ ಠಾಣೆಯಲ್ಲಿ ಏಳು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಕುರಿತು ತನಿಖೆ ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ...