ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

Date:

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್ ವಿರುದ್ಧ ಪಾಲಿಕೆ ಆಯುಕ್ತ ಅಶೋಕ್​ ದುಡಗುಂಟಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಪಾಲಿಕೆಯ ಕೌನ್ಸಿಲ್ ಸಭೆಯು 2023-24ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡಲು ನಿರ್ಧಿರಿಸಿತ್ತು. ಅದಕ್ಕೆ ಮೇಯರ್ ಅನುಮೋದನೆ ಪಡೆಯಲು ಪತ್ರ ಸಿದ್ದಪಡಿಸಿತ್ತು. ಆದರೆ, ಪತ್ರದಲ್ಲಿ 2023-24 ಬದಲಾಗಿ 24-25 ಎಂದು ನಮೂದಿಸಲಾಗಿತ್ತು. ಅದನ್ನು ಸರಿಯಾಗಿ ಪರಿಶೀಲಿಸದ ಮೇಯರ್ ಸಹಿ ಹಾಕಿದ್ದರು. ಆದರೆ, ಈಗ ಆ ಪತ್ರವೇ ಕಾಣೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪತ್ರ ಕಾಣೆಯಾಗಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದಿತ್ತು. ತನಿಖೆ ನಡೆಸಲು ಪಾಲಿಕೆ ನಿರ್ಣಯಿಸಿತ್ತು. ಬಳಿಕ, ಪತ್ರ ಕಾಣೆಯಾಗಿರುವ ಸಂಬಂಧ ತನಿಖೆ ನಡೆಸುವಂತೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಪಾಲಿಕೆ ಮೇಯರ್ ಶೋಭಾ ಸೋಮನಾಚೆ ವಿರುದ್ಧ ದೂರು ದಾಖಲಿಸಿದ್ದೇವೆ. ಬಿಜೆಪಿಗರು ಕಡತವನ್ನು ಆಯಕ್ತರೇ ಸರ್ಕಾರಕ್ಕೆ ಸಲ್ಲಿಸುತ್ತಾರೆ. ಅವರನ್ನೇ ಏನೋ ಕೈವಾಡವಿದೆ ಎನ್ನುತ್ತಿದ್ದಾರೆ. ಮೇಯರ್ ಸಹಿ ಮಾಡಿದ ನಂತರವೇ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸುವುದು. ಹೀಗಾಗಿ, ಕಡತವನ್ನು ಯಾರೋ ಬಚ್ಚಿಟ್ಟಿದ್ದಾರೆ. ಕಡತ ಸಿಕ್ಕ ಬಳಿಕ ಸತ್ಯಾಂಶ ಹೊರಬರುತ್ತದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

“ಪಾಲಿಕೆಯಲ್ಲಿ ಮೇಯರ್ ಅವರೇ ಸುಪ್ರೀಂ ಆಗಿರುತ್ತಾರೆ. ಅವರು ಪತ್ರದಲ್ಲಿದ್ದ ತಪ್ಪನ್ನು ಸರಿ ಮಾಡುವುದು ಬಿಟ್ಟು, ಕಡತವನ್ನು ಕಾಣೆಯಾಗಿಸಿ ತಪ್ಪೆಸದ್ದಾರೆ. ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದು ಜಾರಕಿಹೊಳಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...