ಬೆಳಗಾವಿ | ಮೂರು ತಿಂಗಳ ಹಸುಗೂಸು ಸಮೇತ ಕುಟುಂಬವನ್ನು ಬೀದಿಗೆ ಹಾಕಿದ ಫೈನಾನ್ಸ್ ಕಂಪನಿ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಕ್ರಮದಿಂದ ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಬೀದಿಗೆ ಬಿದ್ದ ಘಟನೆ ನಡೆದಿದೆ.

- Advertisement -

ಚಿಕ್ಕೋಡಿಯ Equitas Small Finance Bank ವತಿಯಿಂದ ಸಾಲ ಮರುಪಾವತಿ ಬಾಕಿ ಇರುವ ಹಿನ್ನೆಲೆಯಲ್ಲಿ ಮನೆ ಸೀಜ್ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

20 ಲಕ್ಷ ರೂ. ಸಾಲ – 7 ಲಕ್ಷ ಬಾಕಿ

ಅಲಖನೂರಿನ ಹನುಮಂತ ಪಾಟೀಲ್ ತಮ್ಮ ತಂದೆ ಶ್ರೀಕಾಂತ್‌ ಪಾಟೀಲ್‌ ಅವರ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನೆ ಅಡವಿಟ್ಟು ಸುಮಾರು 20 ಲಕ್ಷ ರೂ. ಸಾಲ ಪಡೆದಿದ್ದರು. ಕಳೆದ ವರ್ಷ ತಂದೆಯ ನಿಧನದ ಬಳಿಕ ಕುಟುಂಬದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಹನುಮಂತ ಅವರ ಆರೋಗ್ಯ ಸಮಸ್ಯೆಯಿಂದ ಕಳೆದ ಏಳು ತಿಂಗಳಿಂದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.

ಹನುಮಂತ ದಂಪತಿಗೆ ಮೂರು ತಿಂಗಳ ಹಸುಗೂಸು ಸೇರಿದಂತೆ ಐವರು ಕುಟುಂಬಸ್ಥರು ರಾತ್ರಿಯಿಡೀ ಮನೆಯಿಂದ ಹೊರಗೆ ಕಾಲ ಕಳೆದಿದ್ದಾರೆ. ಚಳಿಯಿಂದ ಬಳಲಿದ ಮಗು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಪೊಲೀಸರಿಗೆ ಮನವಿ

ಘಟನೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕುಟುಂಬಕ್ಕೆ ಕಾಲಾವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ನಿಯಮಿತವಾಗಿ ಕಂತು ಪಾವತಿಸುತ್ತಿದ್ದೇನೆ. ಇತ್ತೀಚಿನ ಅನಾರೋಗ್ಯ ಕಾರಣದಿಂದ ವಿಳಂಬವಾಗಿದೆ ಎಂದು ಹನುಮಂತ ಹೇಳಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಆಸ್ತಿಯ ಆಸೆಗೆ ಪತಿಯ ಕೊಲೆ: ಪತ್ನಿ ಮತ್ತು ಮಗ ಸೇರಿ ಸಂಚು

ಘಟನೆ ಕುರಿತು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮಾನವೀಯ ದೃಷ್ಟಿಯಿಂದ ಸಮಸ್ಯೆ ಬಗೆಹರಿಸಲು ಆಗ್ರಹ ಕೇಳಿಬರುತ್ತಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...