ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಬೋಗಸ್‌ ಅರ್ಜಿ ಆರೋಪ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

Date:

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನಕಲಿ ದಾಖಲೆ ಹಾಗೂ ಸುಳ್ಳು ಮಾಹಿತಿ ನೀಡಿ ಫಾರ್ಮ್ ನಂ.7 ಸಲ್ಲಿಸಲು ಯತ್ನಿಸಿದ ಆರೋಪದಡಿ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಸೇರಿದಂತೆ 25 ಜನರ ವಿರುದ್ಧ ಮಾರ್ಕೆಟ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

- Advertisement -

ವಾರ್ಡ್ ನಂ.12ರ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಸೆ.30ರಂದು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಾ. ರವಿ ಪಾಟೀಲ್‌, ಪ್ರಶಾಂತ ಮುಂದಿನಮನಿ, ಶಂಕರ್ ನಾಯಕ್‌ ಸೇರಿದಂತೆ ಇತರರನ್ನು ಆರೋಪಿಗಳೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೆ.22ರಂದು ವೀರಭದ್ರನಗರದ ಮತಗಟ್ಟೆ ಸಂಖ್ಯೆ 195 ಮತ್ತು 196ರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮತದಾರರ ಪಟ್ಟಿಯಲ್ಲಿ ಕಾನೂನುಬದ್ಧವಾಗಿ ಹೆಸರು ಹೊಂದಿರುವ ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು, ಅವರ ಹೆಸರುಗಳನ್ನು ತೆಗೆದುಹಾಕಲು ಫಾರ್ಮ್ ನಂ.7 ಮೂಲಕ ಬೋಗಸ್ ಅರ್ಜಿಗಳನ್ನು ಸಲ್ಲಿಸಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ವೇಳೆ ಸ್ಥಳೀಯರು ಡಾ. ರವಿ ಪಾಟೀಲ್ ಸೇರಿದಂತೆ ಮೂವರನ್ನು ತಡೆದು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಬಳಿಕ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಲಾಗಿತ್ತು.

Advertisements

ಘಟನೆ ನಡೆದ ಎಂಟು ದಿನಗಳ ಬಳಿಕ ಬಿಎಲ್‌ಒ ನೀಡಿದ ದೂರಿನ ಆಧಾರದ ಮೇಲೆ ಮಾರ್ಕೆಟ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಾರ್ಮ್ ನಂ.7 ಅರ್ಜಿಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲು ಪೊಲೀಸರು ಮುಂದಾಗಿದ್ದು, ತನಿಖೆ ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...