ಬಿರು ಬಿಸಿಲಿನ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಬೆಪಾರಿ ಗಲ್ಲಿಯಲ್ಲಿ ಫರ್ನಿಚರ್ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
- Advertisement -
ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲೇ ಅಂಗಡಿಗೆ ವ್ಯಾಪಿಸಿದ್ದು, ಬಾಗಿಲು ಹಾಗೂ ಕಿಟಕಿ ತಯಾರಿಸುತ್ತಿದ್ದ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಅಂಗಡಿ ವಿಲಾಸ್ ಸಾಲಿಮನಿ ಅವರಿಗೆ ಸೇರಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಟ್ಟಿಗೆ ಮತ್ತು ಇತರೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.




