ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಜಿಬಿಎಸ್ ಗೆ ಬೆಳಗಾವಿ ಜಿಲ್ಲೆಯ ದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ದೋನೆವಾಡಿ ಗ್ರಾಮದ ಯೆತಿಲ್ ಬಾಳಗೌಡ ಪಾಟೀಲ (64) ಸೋಮವಾರ ಜಿಬಿಎಸ್ ಸೋಂಕಿಗೆ ಬಲಿಯಾಗಿರುವುದನ್ನು ಕೊಲ್ಲಾಪುರದ ಆಸ್ಪತ್ರೆ ದೃಢಪಡಿಸಿದೆ. ಈ ಮಧ್ಯೆ, ಮೂರ್ನಾಲ್ಕು ದಿನಗಳ ಹಿಂದೆ ಹುಕ್ಕೇರಿ ತಾಲೂಕಿನ 14 ವರ್ಷದ ಬಾಲಕ ಕೂಡ ಇದೇ ಸೋಂಕಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಬಾಲಕನ ಸಾವು ಈ ಸೋಂಕಿನಿಂದಲೇ ಎಂಬುದು ವೈದ್ಯಕೀಯ ವರದಿಯಲ್ಲಿ ಖಚಿತವಾದಲ್ಲಿ ಜಿಲ್ಲೆಯಲ್ಲಿ ಜಿಬಿಎಸ್ ಸೋಂಕಿಗೆ ರಾಜ್ಯದ ಇಬ್ಬರು ಬಲಿಯಾದಂತಾಗುತ್ತದೆ.