ಬೆಳಗಾವಿ | ಶಿವಂ ಅಸೋಶಿಯೇಟ್ಸ್ ಶಿವಾನಂದ ನೀಲಣ್ಣವರ ವಿರುದ್ಧ ಮೊದಲ ಖಾಸಗಿ ದೂರು

Date:

ಬಹುಕೋಟಿ ಹೂಡಿಕೆ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಶಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಜಿಲ್ಲೆಯ ಕಾಗವಾಡ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ.

- Advertisement -

ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬ ಹೂಡಿಕೆದಾರರು ದೂರು ನೀಡಿದ್ದು, ಶೇ.36 ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ತನ್ನಿಂದ ₹5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡು ಬಳಿಕ ಹಣ ಹಾಗೂ ಬಡ್ಡಿ ಮರಳಿ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೂರಿನ ಪ್ರಕಾರ, ಎಪ್ರಿಲ್ ತಿಂಗಳಲ್ಲಿ ಹಂತ ಹಂತವಾಗಿ ₹5 ಲಕ್ಷ ಹಣವನ್ನು ಶಿವಾನಂದ ನೀಲಣ್ಣವರ ಸಂಸ್ಥೆಯಲ್ಲಿ ಹೂಡಿಕೆ ಮಾಡಲಾಗಿತ್ತು. ಆದರೆ ಅವಧಿ ಪೂರ್ಣಗೊಂಡ ಬಳಿಕ ಠೇವಣಿ ಹಣಕ್ಕೆ ಭರವಸೆ ನೀಡಿದಂತೆ ಬಡ್ಡಿ ಹಾಗೂ ಮೂಲ ಹಣವನ್ನು ಮರಳಿ ನೀಡದೇ ವಂಚನೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಶಿವಂ ಅಸೋಶಿಯೇಟ್ ವಿರುದ್ಧ ಬಹುಕೋಟಿ ವಂಚನೆ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಈ ನಡುವೆಯೇ ಶಿವಾನಂದ ನೀಲಣ್ಣವರ ವಿರುದ್ಧ ದಾಖಲಾಗಿರುವ ಮೊದಲ ಅಧಿಕೃತ ಖಾಸಗಿ ದೂರು ಇದಾಗಿದೆ.

ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಇಂದು ಬಸವ ಜಯಂತಿ ಉತ್ಸವ ಸಮಿತಿ ಅಭಿನಂದನಾ ಸಮಾರಂಭ

ಬಸವ ಜಯಂತಿ ಉತ್ಸವ ಸಮಿತಿ-2026 ವತಿಯಿಂದ ಅಭಿನಂದನಾ ಸಮಾರಂಭವು ಸೆ.27ರಂದು ಸಂಜೆ...