ಬೆಳಗಾವಿ | ಸಂತೆಯಲ್ಲಿ ಕಳ್ಳತನ ಐವರ ಬಂಧನ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ವಾರದ ಸಂತೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿರುವ ನಡುವೆಯೇ, ಗ್ರಾಮಸ್ಥರ ಚಾಣಾಕ್ಷತನದಿಂದ ಐವರು ಕಳ್ಳರು ಪೊಲೀಸರ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.

- Advertisement -

ನಾಲ್ಕು ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿದ್ದ ಮಹಾರಾಷ್ಟ್ರ ಮೂಲದ ಕಳ್ಳರ ತಂಡ ಸಂತೆ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಪಾಕೆಟ್ ಹಾಗೂ ಆಭರಣ ಕಳ್ಳತನಕ್ಕೆ ಮುಂದಾಗಿತ್ತು ಎಂದು ತಿಳಿದುಬಂದಿದೆ. ರಾಜು ನವಲೆ ಅವರ ಪಾಕೆಟ್‌ ಕಳ್ಳತನ ಮಾಡಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಘಟನೆಯ ಬಳಿಕ ಗ್ರಾಮಪಂಚಾಯತ್ ಕಚೇರಿ ಎದುರು ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸದಲಗಾ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಆರೋಪಿಗಳು ಬಳಸಿದ್ದ ರಿಕ್ಷಾ, ನಗದು ಹಣ, ಚಿನ್ನದ ಉಂಗುರ ಹಾಗೂ ಆಧಾರ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಾರದ ಸಂತೆಯಲ್ಲಿ ಮಹಿಳೆಯರನ್ನು ಬಳಸಿಕೊಂಡು ಕಳ್ಳತನ ನಡೆಸುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...