ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ ಎಂದರು. ಈಗಾಗಲೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇದ್ದು, ಎಂ.ಬಿ.ಎ ಪದವಿ ಪ್ರಮಾಣ ಪತ್ರದ ಸತ್ಯಾಸತ್ಯತೆ ಕುರಿತು ತನಿಖೆ ನಡೆಯುತ್ತಿದೆ ಎಂದರು.
2013ರಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾಗ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪವೂ ಇದೆ ಎಂದು ಪೂಜಾರಿ ತಿಳಿಸಿದರು. “ಸರ್ಕಾರ ತಕ್ಷಣ ತ್ಯಾಗರಾಜರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳದಿದ್ದರೆ ಡಿವಿಪಿ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಆದರ್ಶ ಗಸ್ತಿ, ಸಹ ಸಂಚಾಲಕ ಸುದೀಪ್ ಐಹೊಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.