ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಎಚ್. ಕೌಜಲಗಿ ಅವರು ಶುಕ್ರವಾರ ಬೆಳಗ್ಗೆ ನಿಧನರಾದರು.
ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶಿವಾನಂದ ಕೌಜಲಗಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿ ಹಾಗೂ ಪುರಸ್ಕಾರಗಳು ಲಭಿಸಿದ್ದವು.
ಮೃತರು ಪತ್ನಿ, ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಶನಿವಾರ ಅಂತ್ಯಕ್ರಿಯೆ
ಅಂತ್ಯಕ್ರಿಯೆಯನ್ನು ನಾಳೆ ಶನಿವಾರ 31/10/2026 ರಂದು ಬೆಳಿಗ್ಗೆ 11 ಗಂಟೆಗೆ ಬೈಲಹೊಂಗಲ ಪಟ್ಟಣದ ಆನಿಗೊಳ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.



